ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ಬೆಲೆ ಲೀಟರ್ಗೆ 1.34 ರುಪಾಯಿ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 2.37 ರುಪಾಯಿ ಏರಿಕೆಯಾಗಿದೆ.
ಇತ್ತೀಚಿಗಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿದ್ದ ತೈಲ ಕಂಪನಿಗಳು ಇದೀಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಯಾದ ಹಿನ್ನೆಲೆಯಲ್ಲಿ ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಪರಿಷ್ಕರಿಸಿದ್ದು, ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬರಲಿದೆ.
ಬೆಲೆ ಏರಿಕೆ ನಂತರ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 66.05 ರು.ಹಾಗೂ ಡೀಸೆಲ್ ಬೆಲೆ 55.26ರು ಆಗಲಿದೆ.
ಅಕ್ಟೋಬರ್ 5ರಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 14 ಪೈಸೆ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 10 ಪೈಸೆ ಏರಿಕೆ ಮಾಡಲಾಗಿತ್ತು.