ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಾಣಿಜ್ಯ

ಸಿರಿಯಾ ಮೇಲೆ ಅಮೆರಿಕ ಕ್ಷಿಪಣಿ ದಾಳಿ ಬೆನ್ನಲ್ಲೇ ಕಚ್ಛಾ ತೈಲ ದರದಲ್ಲಿ ಭಾರಿ ಏರಿಕೆ!

ಕೆಮಿಕಲ್ ದಾಳಿಯನ್ನು ಖಂಡಿಸಿ ಸಿರಿಯಾದ ಮೇಲೆ ಅಮೆರಿಕ ನಡೆಸುತ್ತಿರುವ ಕ್ಷಿಪಣಿ ದಾಳಿ ಬೆನ್ನಲ್ಲೇ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ದರದಲ್ಲಿ ಬಾರಿ ಏರಿಕೆ ಕಂಡುಬಂದಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 7 Apr 2017, 11:24 am

ಸಿಂಗಾಪುರ: ಕೆಮಿಕಲ್ ದಾಳಿಯನ್ನು ಖಂಡಿಸಿ ಸಿರಿಯಾದ ಮೇಲೆ ಅಮೆರಿಕ ನಡೆಸುತ್ತಿರುವ ಕ್ಷಿಪಣಿ ದಾಳಿ ಬೆನ್ನಲ್ಲೇ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ದರದಲ್ಲಿ ಬಾರಿ ಏರಿಕೆ ಕಂಡುಬಂದಿದೆ.

ಮೂಲಗಳ ಪ್ರಕಾರ ಅಮೆರಿಕ ಸೇನೆ ಸಿರಿಯಾದಲ್ಲಿ ಕ್ಷಿಪಣಿ ದಾಳಿ ನಡೆಸುತ್ತಿರುವ ಕುರಿತು ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದರ ಪ್ರತೀ ಬ್ಯಾರೆಲ್ ಗೆ ಬರೊಬ್ಬರಿ ಶೇ.2 ರಷ್ಟು  ಅಂದರೆ 1 ಡಾಲರ್ ನಷ್ಟು ದರ ಏರಿಕೆ ಕಂಡುಬಂದಿದೆ. ಈ ಹಿಂದೆ ಪ್ರತೀ ಬ್ಯಾರೆಲ್ ಕಚ್ಛಾ ತೈಲ ದರ 54.78 ಡಾಲರ್ ನಷ್ಚಿತ್ತು. ಆದರೆ ಇದೀಗ ರಾತ್ರೋ ರಾತ್ರಿ  55.78 ಡಾಲರ್ ಗೆ ಏರಿಕೆಯಾಗಿದೆ. ಅಮೆರಿಕದ ವೆಸ್ಟ್ ಟೆಕ್ಸಾಸ್  ಇಂಟರ್ ಮೀಡಿಯೆಟ್ ಮಾರುಕಟ್ಟೆಯಲ್ಲೂ ಕಚ್ಛಾತೈಲ ದರದಲ್ಲಿ ಏರಿಕೆ ಕಂಡುಬಂದಿದ್ದು, ಪ್ರತೀ ಬ್ಯಾರೆಲ್ ಮೇಲೆ 1 ಡಾಲರ್ ಏರಿಕೆಯೊಂದಿಗೆ ಕಚ್ಛಾ ತೈಲದರ ಅಲ್ಲಿ 52.64ಕ್ಕೆ ಏರಿಕೆಯಾಗಿದೆ.

ಮಾರ್ಚ್ ತಿಂಗಳಲ್ಲೇ ಇದು ಅತ್ಯಧಿಕ ದರ ಏರಿಕೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸುತ್ತಿದ್ದು, ಸಿರಿಯಾ ಮೇಲೆ ಅಮೆರಿಕ ದಾಳಿ ನಡೆಸಿರುವುದರಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬ ಶಂಕೆಯೇ ತೈಲ ದರ ಏರಿಕೆ  ಕಾರಣ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments