ಗೋಕುಲಂ ಚಿಟ್ ಫಂಡ್ ಹಗರಣ: ಕರ್ನಾಟಕ, ತಮಿಳುನಾಡು, ಕೇರಳದ ವಿವಿಧೆಡೆ ಐಟಿ ದಾಳಿ!
ಗೋಕುಲಂ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆದಾಯ ತೆರಿಗೆ ಅಧಿಕಾರಿಗಳು ವಿವಿಧ ರಾಜ್ಯಗಳಲ್ಲಿರುವ ಸಂಸ್ಥೆಯ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಚೆನ್ನೈ: ಗೋಕುಲಂ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆದಾಯ ತೆರಿಗೆ ಅಧಿಕಾರಿಗಳು ವಿವಿಧ ರಾಜ್ಯಗಳಲ್ಲಿರುವ ಸಂಸ್ಥೆಯ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಮೂಲಗಳ ಪ್ರಕಾರ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಒಟ್ಟು 80 ಪ್ರದೇಶಗಳಲ್ಲಿ ಅದಿಕಾರಿಗಳು ದಾಳಿ ಮಾಡಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಪೈಕಿ ತಮಿಳುನಾಡಿನ 43 ಪ್ರದೇಶಗಳಲ್ಲಿ ದಾಳಿ ಮಾಡಲಾಗಿದ್ದು, ಕೇರಳದ 29 ಮತ್ತು ಕರ್ನಾಟಕದ ಆರು ಪ್ರದೇಶಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಮುಂಜಾನೆಯಿಂದಲೇ ದಾಳಿ ಮಾಡಿದ ಅಧಿಕಾರಿಗಳು ಸಂಸ್ಥೆಗೆ ಸೇರಿದ ಕಚೇರಿಗಳ ದಾಳಿ ಮಾಡಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿದ್ದು, ಚಿಟ್ ಫಂಡ್ ಸಂಸ್ಧೆಯ ಅಕ್ರಮ ಹಣದ ಮೂಲದ ಕುರಿತಾದ ಮಾಹಿತಿಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಇನ್ನು ಇಂದಿನ ದಾಳಿಯಲ್ಲಿ ತಮಿಳುನಾಡಿನ ಹಲವು ಸ್ಥಳೀಯ ರಾಜಕಾರಣಿಗಳು ಮತ್ತು ಅವರ ಬೆಂಬಲಿಗರ ಮನೆಗಳ ಮೇಲೂ ದಾಳಿನಡೆಸಲಾಗಿದೆ ಎಂದು ತಿಳದುಬಂದಿದೆ.
ಇತ್ತೀಚೆಗಷ್ಟೇ ದೆಹಲಿ ಕ್ರೈಂ ಬ್ರಾಂಚ್ ತಂಡ ತಮಿಳುನಾಡು ಸಚಿವ ವಿಜಯ ಭಾಸ್ಕರ್ ಹಾಗೂ ನಟ ಹಾಗೂ ರಾಜಕಾರಣಿ ಶತರ್ ಕುಮಾರ್ ಅವರ ಮೇನೆ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.