ಸಂಗ್ರಹ ಚಿತ್ರ 
ವಾಣಿಜ್ಯ

ಗುಜರಾತ್ ಚುನಾವಣೋತ್ತರ ಸಮೀಕ್ಷಾ ವರದಿ: ಸೆನ್ಸೆಕ್ಸ್, ರೂಪಾಯಿ ಮೌಲ್ಯ ಏರಿಕೆ

ಗುಜರಾತ್ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಅಂತ್ಯವಾದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷಾ ವರದಿಗಳು ಬಿಜೆಪಿ ಪಕ್ಷದ ಪರವಾಗಿರುವ ಬೆನ್ನಲ್ಲೇ ಷೇರುಮಾರುಕಟ್ಟೆಯಲ್ಲಿ ಕೂಡ ಚೇತೋಹಾರಿ ಬೆಳವಣಿಗೆ ಕಂಡಿದೆ.

ಮುಂಬೈ: ಗುಜರಾತ್ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಅಂತ್ಯವಾದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷಾ ವರದಿಗಳು ಬಿಜೆಪಿ ಪಕ್ಷದ ಪರವಾಗಿರುವ ಬೆನ್ನಲ್ಲೇ ಷೇರುಮಾರುಕಟ್ಟೆಯಲ್ಲಿ ಕೂಡ ಚೇತೋಹಾರಿ ಬೆಳವಣಿಗೆ ಕಂಡಿದೆ.
ಅತ್ತ ಗುಜರಾತ್ ನಲ್ಲಿ ಅಂತಿಮದ ಹಂತದ ಮತದಾನ ಪ್ರಕ್ರಿಯೆ ಚಾಲ್ತಿಯಲ್ಲಿರುವಂತೆಯೇ ಇತ್ತ ಮುಂಬೈ ಷೇರುಮಾರುಕಟ್ಟೆ ದಿನದ ವಹಿವಾಟು ಅಂತ್ಯಕ್ಕೆ ಶೇ.0.59 ಅಥವಾ 193.66 ಅಂಕಗಳ ಏರಿಕೆ ಕಂಡಿದೆ. ಆ ಮೂಲಕ ಸೆನ್ಸೆಕ್ಸ್  33,246.70 ಅಂಕಕ್ಕೆ ಏರಿಕೆಯಾಗಿದ್ದು, ನಿಫ್ಟಿ ಕೂಡ  59.15 ಅಂಕಗಳ ಏರಿಕೆಯೊಂದಿಗೆ 10,252.10ಅಂಕಗಳಿಗೆ ಏರಿಕೆ ಕಂಡಿದೆ. ಪ್ರಮುಖವಾದಿ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸುತ್ತದೆ ಎಂಬ  ಆಶಾಭಾವ  ಷೇರುಮಾರುಕಟ್ಟೆ ಉಂಟಾದ ಪರಿಣಾಮ ಹೂಡಿಕೆದಾರರು ಸಕಾರಾತ್ಮಕವಾಗಿ ಹೂಡಿಕೆ ಮಾಡಿರುವುದೇ ಇಂದಿನ ಚೇತರಿಕೆಗೆ ಕಾರಣ ಎನ್ನಲಾಗಿದೆ.
ಪ್ರಮುಖವಾಗಿ ಇಂದಿನ ವಹಿವಾಟಿನಲ್ಲಿ ಬ್ಯಾಂಕಿಂಗ್ ಕ್ಷೇತ್ರ, ವೈದ್ಯಕೀಯ ಸಂಸ್ಥೆಗಳು ಮತ್ತು ಗ್ರಾಹಕ ಉಪಯೋಗಿ ಕ್ಷೇತ್ರಗಳು ಹೆಚ್ಚೆಚ್ಚು ಲಾಭ ಗಳಿಸಿದ್ದು, ಆಕ್ಸಿಸ್ ಬ್ಯಾಂಕ್ ನ ಷೇರು ಮೌಲ್ಯದಲ್ಲಿ ಶೇ.1.24ಏರಿಕೆಯಾಗಿದ್ದು, ಐಟಿಸಿ,  ಸಿಪ್ಲಾ, ಎಂ ಅಂಡ್ ಎಂ ಮತ್ತು ಡಾ.ರೆಡ್ಡೀಸ್ ಸಂಸ್ಥೆಗಳ ಷೇರು ಮೌಲ್ಯದಲ್ಲಿ ಏರಿಕೆಯಾಗಿದೆ.
ಡಾಲರ್ ಎದುರು ರುಪಾಯಿ ಮೌಲ್ಯ ಏರಿಕೆ
ಇನ್ನು ಷೇರುಮಾರುಕಟ್ಟೆ ಏರಿಕೆ ಬೆನ್ನಲ್ಲೇ ಭಾರತೀಯ ರೂಪಾಯಿ ಮೌಲ್ಯದಲ್ಲಿಯೂ ಕೂಡ ಚೇತರಿಕೆ ಕಂಡುಬಂದಿದ್ದು, ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ ಶೇ.0.15ರಷ್ಟು ಏರಿಕೆ ಕಂಡುಬಂದಿದೆ. ಬುಧವಾರದ ಮಾರುಕಟ್ಟೆ  ಅಂತ್ಯದ ವೇಳೆ 64.44ರಷ್ಟಿದ್ದ ರೂಪಾಯಿ ಮೌಲ್ಯ ಇಂದಿನ ವಹಿವಾಟು ಅಂತ್ಯದ ಹೊತ್ತಿಗೆ 64.35ಕ್ಕೆ ಏರಿಕೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video