ವಾಣಿಜ್ಯ

ಯಾವುದೇ ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಮುಚ್ಚುವುದಿಲ್ಲ: ಕೇಂದ್ರ, ಆರ್‏ಬಿಐ ಸ್ಪಷ್ಟನೆ

Vishwanath S
ನವದೆಹಲಿ/ಮುಂಬೈ: ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಮುಚ್ಚಲು ಕೇಂದ್ರ ಸರ್ಕಾರ ಹಾಗೂ ರಿಸರ್ವ್‌ ಬ್ಯಾಂಕ್ ಆಫ್‌ ಇಂಡಿಯಾ(ಆರ್‌ಬಿಐ) ನಿರ್ಧರಿಸಿವೆ ಎಂದು ಸಾಮಾಜಿಕ ವಲಯದಲ್ಲಿ ಹರಿದಾಡುತ್ತಿದ್ದ ವದಂತಿಗೆ ಆರ್‌ಬಿಐ ಸ್ಪಷ್ಟನೆ ನೀಡಿದ್ದು ಯಾವುದೇ ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಹೇಳಿದೆ. 
ಸಾಮಾಜಿಕ ಜಾಲತಾಣಗಳಲ್ಲಿ ನಷ್ಟದಲ್ಲಿರುವ ಕೆಲವು ಬ್ಯಾಂಕ್ ಗಳನ್ನು ಮುಚ್ಚಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ವದಂತಿಗಳು ಹರಿದಾಡುತ್ತಿದ್ದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿತ್ತು. 
ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಮುಚ್ಚುವ ಯಾವುದೇ ಪ್ರಶ್ನೆ ಇಲ್ಲ. ಬಂಡವಾಳ ಮರುಪೂರ್ಣ ಯೋಜನೆಯಡಿಯಲ್ಲಿ ಬ್ಯಾಂಕುಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದ್ದು 2.11 ಲಕ್ಷ ಕೋಟಿ ರುಪಾಯಿ ನೀಡಲಾಗಿದೆ ಎಂದು ಹಣಕಾಸು ಸೇವಾ ಇಲಾಖೆಯ ಕಾರ್ಯದರ್ಶಿ ರಾಜೀವ್ ಕುಮಾರ್ ಟ್ವೀಟರ್ ನಲ್ಲಿ ತಿಳಿಸಿದ್ದಾರೆ. 
ಇನ್ನು ಸಾರ್ವಜನಿಕ ವಲಯದ ಬ್ಯಾಂಕ್‌ಗಳಾದ ಐಡಿಬಿಐ ಬ್ಯಾಂಕ್, ಇಂಡಿಯನ್ ಓವರ್ ಸಿಸ್ ಬ್ಯಾಂಕ್ ಮತ್ತು ಯುಕೋ ಬ್ಯಾಂಕ್ ಗಳು ಸೇರಿದಂತೆ ಹಲವು ಬ್ಯಾಂಕುಗಳ ವಿರುದ್ಧ ಆರ್ ಬಿಐ ಕ್ರಮ ಕೈಗೊಳ್ಳಲಿದೆ ಎಂದು ಹೇಳಲಾಗಿತ್ತು. 
SCROLL FOR NEXT