ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ 
ವಾಣಿಜ್ಯ

ಇನ್ಫೋಸಿಸ್ ನಲ್ಲಿ ಟಾಟಾ ಮಾದರಿಯ ಬಿಕ್ಕಟ್ಟು: ವೇತನದ ಪ್ಯಾಕೇಜ್ ವಿಷಯದಲ್ಲಿ ಭಿನ್ನಾಭಿಪ್ರಾಯ

ಇತ್ತೀಚೆಗಷ್ಟೇ ಟಾಟಾ ಆಡಳಿತ ಮಂಡಳಿಯಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು. ಈಗ ಇನ್ಫೋಸಿಸ್ ನಲ್ಲೂ ಇದೇ ಮಾದರಿಯ ಬಿಕ್ಕಟ್ಟು ಎದುರಾಗುವ ಸೂಚನೆಗಳು ಕಂಡುಬಂದಿದೆ.

ಬೆಂಗಳೂರು: ಇತ್ತೀಚೆಗಷ್ಟೇ ಟಾಟಾ ಆಡಳಿತ ಮಂಡಳಿಯಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೆ ಮಿಸ್ತ್ರಿ ರಾಜೀನಾಮೆ ನೀಡಿದ್ದರು. ಈಗ ಇನ್ಫೋಸಿಸ್ ನಲ್ಲೂ ಇದೇ ಮಾದರಿಯ ಬಿಕ್ಕಟ್ಟು ಎದುರಾಗುವ ಸೂಚನೆಗಳು ಕಂಡುಬಂದಿದೆ.
ಟಾಟಾ ಸಮೂಹದ ಸಂಸ್ಥೆಗಳಲ್ಲಿ ಉಂಟಾದಂತೆ ಇನ್ಫೋಸಿಸ್ ನಲ್ಲೂ ಸ್ಥಾಪಕ ಸದಸ್ಯರು ಹಾಗೂ ಹಾಲಿ ಆಡಳಿತ ಮಂಡಳಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ಖಾಸಗಿ ಚಾನಲ್ ಒಂದಕ್ಕೆ ಸಂದರ್ಶನ ನೀಡಿರುವ ಇನ್ಫೋಸಿಸ್ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರ ಮಾತುಗಳಲ್ಲಿ ವೇತನದ ಪ್ಯಾಕೇಜ್ ವಿಷಯವಾಗಿ ಸ್ಥಾಪಕ ಸದಸ್ಯರು ಹಾಗೂ ಹಾಲಿ ಆಡಳಿತ ಮಂಡಳಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬುದು ಸ್ಪಷ್ಟವಾಗಿದೆ.   
ಸಂಸ್ಥೆಯನ್ನು ಬಿಟ್ಟು ಹೋಗುವ ಉದ್ಯೋಗಿಗಳಿಗೆ ಕೊನೆಯಲ್ಲಿ ಹೆಚ್ಚಿನ ವೇತನ ನೀಡಲಾಗುತ್ತಿದೆ ಹಾಗೂ ಆಡಳಿತದ ಗುಣಮಟ್ಟ ಕ್ಷೀಣಿಸುತ್ತಿರುವುದರ ಬಗ್ಗೆ ಸಂದರ್ಶನದಲ್ಲಿ ನಾರಾಯಣ ಮೂರ್ತಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ಫೋಸಿಸ್ ನ ಸಿಇಒ ವಿಶಾಲ್ ಸಿಕ್ಕಾ ಅವರಿಗೆ ಕಳೆದ ವರ್ಷ ವೇತನ ಹೆಚ್ಚು ಮಾಡಿದುವುದರ ಹೊರತಾಗಿಯೂ ಈಗ ಒಟ್ಟು 11 ಮಿಲಿಯನ್ ಡಾಲರ್ ವೇತವನ್ನು ನೀಡುವ ಪ್ರಸ್ತಾವನೆಗೆ ನಾರಾಯಣ ಮೂರ್ತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾರಾಯಣ ಮೂರ್ತಿ ಅವರಂತೆಯೇ, ಮಾಜಿ ಸಿಇಒ ಮೋಹನ್ ದಾಸ್ ಪೈ ಸಹ ಅಸಮಾಧಾನ ವ್ಯಕ್ತಪಡಿಸಿದ್ದು, ಕಾರ್ಪೊರೇಟ್ ವ್ಯವಹಾರಗಳಲ್ಲಿ ಪಾರದರ್ಶಕತೆಯ ಅಗತ್ಯವಿದೆ ಹಾಗೂ ನಾರಾಯಣ ಮೂರ್ತಿ ಅವರು ಎತ್ತಿರುವ ಪ್ರಶ್ನೆಗಳು ಸರಿಯಾಗಿವೆ ಎಂದು ಹೇಳಿದ್ದಾರೆ. 
ಅತಿ ರಹಸ್ಯದ ರೀತಿಯಲ್ಲಿ ಇನ್ಫೋಸಿಸ್ ನ ಮಾಜಿ ಸಿಎಫ್ಒ ಗೆ ಹೆಚ್ಚು ಮೊತ್ತದ ಬೀಳ್ಕೊಡುಗೆ ವೇತನ (23 ಕೋಟಿ) ನೀಡಿರುವುದು ಸೂಕ್ತ ನಿರ್ಧಾರವಲ್ಲ, ಈ ಬಗ್ಗೆ ಆಡಳಿತ ಮಂಡಳಿ ಗಮನ ಹರಿಸಬೇಕಿದೆ ಎಂದು ಮೋಹನ್ ದಾಸ್ ಪೈ ಹೇಳಿದ್ದಾರೆ.  ನಾರಾಯಣ ಮೂರ್ತಿ ಅವರ ಹೇಳಿಕೆಗೆ ಮತೋರ್ವ ಸಿಎಫ್ಒ ಸಹ ಪೂರಕವಾಗಿ ಹೇಳಿಕೆ ನೀಡಿದ್ದು, ಅಧ್ಯಕ್ಷರಾದ ಆರ್ ಶೇಷಸಾಯಿ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಇನ್ಫೋಸಿಸ್ ಸ್ಥಾಪಕ ಸದಸ್ಯರು ಶೇಷಸಾಯಿ ಅವರು ಹಾಗೂ ಆಡಳಿತ ಮಂಡಳಿ ಕೈಗೊಂಡ ನಿರ್ಧಾರಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸ್ಥಾಪಕ ಸದಸ್ಯರ ವಿರೋಧದ ನಡುವೆ ಇನ್ಫೋಸಿಸ್ ನ ಆಡಳಿತ ಮಂಡಳಿ ಸದಸ್ಯೆ ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಸಿಇಒ ಸಿಕ್ಕಾ ಬೆಂಬಲಕ್ಕೆ ನಿಂತಿದ್ದು, ಸಂಸ್ಥೆ ಸವಾಲಿನ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಸಿಕ್ಕಾ ಅವರ ಕಾರ್ಯಕ್ಷಮತೆಯಲ್ಲಿ ನಂಬಿಕೆ ಇದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ