ಮುಂಬೈ: ಗ್ರಾಹಕರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಟಾಟಾ ಮೋಟಾರ್ಸ್ ಮೈಕ್ರೊಸಾಫ್ಟ್ ನೊಂದಿಗೆ ಸಹಭಾಗಿತ್ವದ ಒಪ್ಪಂದಕ್ಕೆ ಸಹಿ ಹಾಕಿದೆ.
ಕಾರು ಚಾಲನೆಯಲ್ಲಿ ಅತ್ಯುತ್ತಮ ವೈಶಿಷ್ಟ್ಯ (ಫೀಚರ್) ಗಳನ್ನು ನೀಡುವುದು ಸಂಸ್ಥೆಯ ಉದ್ದೇಶವಾಗಿದ್ದು, ಹೊಸ ವೈಶಿಷ್ಟ್ಯಗಳನ್ನು ಹೊಂದಿರುವ ಕಾರು ಮಾ.7 ರಂದು ಜಿನಿವಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮೋಟಾರು ಪ್ರದರ್ಶನದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಸಂಸ್ಥೆಗಳು ತಿಳಿಸಿವೆ.
ಕಾರಿನಲ್ಲಿ ಕೃತಕ ಬುದ್ಧಿಮತ್ತೆ, ಅಂತರ್ಜಾಲ ಬಳಕೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಚಾಲಕರಿಗೆ ಅತ್ಯುತ್ತಮ ಚಾಲನೆಯ ಅನುಭೂತಿಯನ್ನು ನೀಡುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ಮೈಕೋಸಾಫ್ಟ್ ಇಂಡಿಯಾದ ಅಧ್ಯಕ್ಷ ಅನಂತ್ ಮಹೇಶ್ವರಿ ಹೇಳಿದ್ದಾರೆ.