ವಾಣಿಜ್ಯ

ಜಿಎಸ್ ಟಿಯಿಂದ ರಾಜ್ಯಗಳಿಗೆ ಆಗುವ ನಷ್ಟ ಭರಿಸಲು ಮಂಡಳಿ ಸಭೆಯಲ್ಲಿ ತೀರ್ಮಾನ

Sumana Upadhyaya
ಮುಂಬೈ: ಸಂಸತ್ತಿನಲ್ಲಿ ಮಂಡಿಸಬೇಕಾಗಿರುವ ಸರಕು ಮತ್ತು ಸೇವಾ ತೆರಿಗೆ ಕಾನೂನಿನಲ್ಲಿರುವ ಕೆಲವು ಅಡೆತಡೆಗಳನ್ನು ತೆರವುಗೊಳಿಸಲು ಕೆಲವು ಪ್ರಮುಖ ಕಾನೂನುಗಳನ್ನು ಜಾರಿಗೆ ತರಲು ಸರಕು ಮತ್ತು ಸೇವಾ ತೆರಿಗೆ ಮಂಡಳಿ ಶನಿವಾರ ಒಪ್ಪಿಗೆ ನೀಡಿದೆ.
ಜುಲೈ 1ರಿಂದ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೆ ತರಲು ಯೋಜಿಸಲಾಗಿದ್ದು, ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಅದಕ್ಕೆ ಸಂಬಂಧಪಟ್ಟಂತೆ ಕಾನೂನು ಜಾರಿಗೆ ತರುವ ಉದ್ದೇಶವಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. 
ನಿನ್ನೆ ರಾಜಸ್ತಾನದ ಉದಯ್ ಪುರ್ ನಲ್ಲಿ ನಡೆದ ಸರಕು ಮತ್ತು ಸೇವಾ ತೆರಿಗೆ ಮಂಡಳಿ ಸಭೆಯಲ್ಲಿ ತೆರಿಗೆ ಜಾರಿಯಿಂದ ರಾಜ್ಯಗಳಿಗೆ ಉಂಟಾಗುವ ನಷ್ಟವನ್ನು ಕೇಂದ್ರ ಸರ್ಕಾರ ಭರಿಸಲು ಕಾನೂನು ಜಾರಿಗೆ ಒಪ್ಪಿಗೆ ನೀಡಲಾಯಿತು.
ಪರಿಹಾರ ಮಸೂದೆಯನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸುವ ಯೋಜನೆ ಸರ್ಕಾರಕ್ಕಿದೆ. ಮಾರ್ಚ್ 4 ಮತ್ತು 5ರಂದು ಮಂಡಳಿ ಮತ್ತೆ ಸಭೆ ನಡೆಸಲಿದೆ.
SCROLL FOR NEXT