ವಾಣಿಜ್ಯ

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಅಧಿಕಾರ ಸ್ವೀಕಾರ

Lingaraj Badiger
ಮುಂಬೈ: 150 ವರ್ಷಗಳ ಇತಿಹಾಸವಿರುವ ಟಾಟಾ ಸನ್ಸ್ ನ ಮೊದಲ ಪಾರ್ಸಿಯೇತರ ಅಧ್ಯಕ್ಷರಾಗಿ ಎನ್.ಚಂದ್ರಶೇಖರನ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಟಿಸಿಎಸ್ ಮುಖ್ಯಸ್ಥರಾಗಿದ್ದ ಚಂದ್ರಶೇಖರನ್ ಅವರು ಇಂದು 103 ಬಿಲಿಯನ್ ಡಾಲರ್ ಮೌಲ್ಯದ ಟಾಟಾ ಗ್ರೂಪ್ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಬಾಂಬೆ ಹೌಸ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಶೇಖರನ್ ಅವರು, ತಮ್ಮ ಟಾಟಾ ಸನ್ಸ್ ಮುಖ್ಯಸ್ಥರನ್ನಾಗಿ ನೇಮಕ ಮಾಡಿದಕ್ಕೆ ಕೃತಜ್ಞತೆ ಸಲ್ಲಿಸಿದರು. ಅಲ್ಲದೆ ಕಂಪನಿಯನ್ನು ಮತ್ತಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಾಟಾ ಸನ್ಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ನಾವು ಕಂಪನಿಗೆ ಸಂಬಂಧಿಸಿದ ಪ್ರತಿಯೊಬ್ಬರು ಹೆಮ್ಮೆ ಪಡುವಂತಹ ಕೆಲಸ ಮಾಡುತ್ತೇವೆ ಎಂದು ಚಂದ್ರಶೇಖರನ್ ಅವರು ಹೇಳಿದ್ದಾರೆ.
ಸೈರಸ್ ಮಿಸ್ತ್ರಿ ಅವರನ್ನು ವಜಾಗೊಳಿಸಿದ ನಂತರ ಜ.12ರಂದು ಚಂದ್ರಶೇಖರನ್ ರನ್ನು ಟಾಟಾ ಸನ್ಸ್ ಮುಖ್ಯಸ್ಥರಾಗಿ ಆಯ್ಕೆ ಮಾಡಲಾಗಿತ್ತು. ವಿಶ್ವ ವಿಖ್ಯಾತ ಟಾಟಾ ಸಂಸ್ಥೆಯು 1868ರಲ್ಲಿ ಸ್ಥಾಪನೆಗೊಂಡಿದ್ದು ಹಲವು ದೃಷ್ಟಿಯಿಂದ ಅದಕ್ಕೆ ಐತಿಹಾಸಿಕ ಮಹತ್ವವಿದೆ.
SCROLL FOR NEXT