ಸಾಂದರ್ಭಿಕ ಚಿತ್ರ 
ವಾಣಿಜ್ಯ

ಆರ್ ಬಿಐಯ ಸ್ವಾತಂತ್ರ್ಯ, ಸ್ವಾಯತ್ತತೆಯನ್ನು ಸರ್ಕಾರ ಗೌರವಿಸುತ್ತದೆ: ಹಣಕಾಸು ಸಚಿವಾಲಯ

ಭಾರತೀಯ ರಿಸರ್ವ್ ಬ್ಯಾಂಕಿನ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಯನ್ನು ಸರ್ಕಾರ ಸಂಪೂರ್ಣವಾಗಿ ಗೌರವಿಸುತ್ತದೆ ಎಂದು...

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕಿನ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಯನ್ನು ಸರ್ಕಾರ ಸಂಪೂರ್ಣವಾಗಿ ಗೌರವಿಸುತ್ತದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. ಮತ್ತು ಆರ್ ಬಿಐ ಕಾರ್ಯನಿರ್ವಹಣೆಯಲ್ಲಿ ಮಧ್ಯ ಪ್ರವೇಶಿಸುವ ಆಪಾದನೆಯನ್ನು ತಳ್ಳಿಹಾಕಿದೆ.
ಸಾರ್ವಜನಿಕರಿಗೆ ಉಪಯೋಗವಾಗುವ ಕಾನೂನಿನ ವ್ಯಾಪ್ತಿಯೊಳಗೆ ಬರುವ ಅನೇಕ ವಿಷಯಗಳ ಬಗ್ಗೆ ಸರ್ಕಾರ ಮತ್ತು ಆರ್ ಬಿಐ ಮಧ್ಯೆ ಸಲಹೆ, ಅಭಿಪ್ರಾಯ ವಿನಿಮಯ ನಡೆಯುತ್ತಿರುತ್ತದೆ. ಕಾನೂನಿನ ಪ್ರಕಾರ ಸಲಹೆ ನೀಡುವುದು ಕಡ್ಡಾಯವಾಗಿದ್ದು ಅದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಾಗಿದೆ. ಅದನ್ನು ಆರ್ ಬಿಯ ಸ್ವಾಯತ್ತತೆಯ ಅತಿಕ್ರಮ ಎಂದು ಪರಿಗಣಿಸಬಾರದು ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ರಿಸರ್ವ್ ಬ್ಯಾಂಕ್ ಅಧಿಕಾರಿಗಳು ಮತ್ತು ನೌಕರರ ಸಂಯುಕ್ತ ವೇದಿಕೆ ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ನೋಟುಗಳ ಚಲಾವಣೆ ಹಿಂತೆಗೆತದ ನಂತರ ತಮಗೆ ಅವಮಾನವಾಗಿದ್ದು, ಕೇಂದ್ರೀಯ ಬ್ಯಾಂಕ್ನ ಸ್ವಾಯತ್ತತೆ ಮೇಲೆ ಸರ್ಕಾರ ಕರೆನ್ಸಿ ಸಮನ್ವಯಕ್ಕೆ ಅಧಿಕಾರಿಯೊಬ್ಬರನ್ನು ನೇಮಿಸಿ ಕೇಂದ್ರ ಬ್ಯಾಂಕಿನ ಸ್ವಾಯತ್ತತೆಗೆ ತಾಕೀತು ಮಾಡುತ್ತಿದ್ದಾರೆ ಎಂದು ಆರೋಪಿಸಿತ್ತು. 
ನೋಟುಗಳ ಚಲಾವಣೆ ಹಿಂತೆಗೆತದ ನಂತರ ಮಾಜಿ ಗವರ್ನರ್ ಗಳಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಬಿಮಲ್ ಜಲಾನ್ ಮತ್ತು ವೈ.ವಿ.ರೆಡ್ಡಿಯವರು ಆರ್ ಬಿಐ ಕಾರ್ಯವೈಖರಿಯಲ್ಲಿ ಸರ್ಕಾರದ ಹಸ್ತಕ್ಷೇಪದ ಬಗ್ಗೆ ಪ್ರಶ್ನಿಸಿದ್ದರಿಂದ ಈ ಎಲ್ಲಾ ವಿಷಯಗಳು ಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್