ಪ್ರಸಕ್ತ ವರ್ಷ ಇನ್ಫೋಸಿಸ್ ನಿಂದ 20 ಸಾವಿರ ಉದ್ಯೋಗ
ಈ ವರ್ಷ 20 ಸಾವಿರ ಹೊಸ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಇನ್ಫೊಸಿಸ್ ಸಿಒಒ ಯು.ಬಿ. ಪ್ರವೀಣ್ ರಾವ್...
ನವದೆಹಲಿ: ಈ ವರ್ಷ 20 ಸಾವಿರ ಹೊಸ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಇನ್ಫೊಸಿಸ್ ಸಿಒಒ ಯು.ಬಿ. ಪ್ರವೀಣ್ ರಾವ್ ಹೇಳಿದ್ದಾರೆ.
ಐಟಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಅವರ ಜೊತೆಗಿನ ಸಭೆಯ ನಂತರ ಮಾತನಾಡಿದ ಪ್ರವೀಣ್ ರಾವ್
ಭಾರಿ ಪ್ರಮಾಣದಲ್ಲಿ ಉದ್ಯೋಗ ಕಡಿತ ಮಾಡಲಾಗುತ್ತಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿ ಹಾಕಿದರು, ಈ ವರದಿಗಳು ಉತ್ಪ್ರೇಕ್ಷೆಯಿಂದ ಕೂಡಿವೆ ಎಂದು ಹೇಳಿದ್ದಾರೆ.
ಕಳಪೆ ಸಾಧನೆ ಆಧಾರದ ಮೇಲೆ 300- 400 ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಉದ್ಯೋಗ ಸೃಷ್ಟಿಸುವಲ್ಲಿ ಇನ್ಫೊಸಿಸ್ ಮುಂಚೂಣಿಯಲ್ಲಿದೆ. ಕಾರ್ಯಕ್ಷಮತೆ ಆಧಾರದ ಮೇಲೆ ಕೆಲವರನ್ನು ಕೆಲಸದಿಂದ ತೆಗೆಯುವುದನ್ನೇ ದೊಡ್ಡ ವಿಷಯವನ್ನಾಗಿ ಬಿಂಬಿಸುವುದು ಬೇಡ ಎಂದು ಮನವಿ ಮಾಡಿದ್ದಾರೆ.
ಕಳೆದ ವರ್ಷ ಕೂಡ ಕಂಪೆನಿ 20,000 ಸಿಬ್ಬಂದಿ ನೇಮಕ ಮಾಡಿಕೊಂಡಿತ್ತು. ಅಷ್ಟೇ ಸಂಖ್ಯೆಯ ಸಿಬ್ಬಂದಿಯನ್ನು ಈ ವರ್ಷವೂ ನೇಮಕ ಮಾಡಿಕೊಳ್ಳಲಾಗುವುದು. ಮೊದಲ 6 ತಿಂಗಳಲ್ಲಿ ಹತ್ತು ಸಾವಿರ ಜನರಿಗೆ ಉದ್ಯೋಗ ನೀಡಲಾಗುವುದು’ ಎಂದು ರಾವ್ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.