ವಾಣಿಜ್ಯ

ಜಿಎಸ್ ಟಿ ಗೊಂದಲ ಪರಿಹಾರಕ್ಕೆ 'ವಾರ್ ರೂಂ' ಸ್ಥಾಪಿಸಿದ ಕೇಂದ್ರ

Lingaraj Badiger
ನವದೆಹಲಿ: ದೇಶವನ್ನು ಏಕರೂಪದ ಮಾರುಕಟ್ಟೆಯನ್ನಾಗಿಸುವ, ಸ್ವತಂತ್ರ ಭಾರತದ ಅತಿದೊಡ್ಡ ತೆರಿಗೆ ಸುಧಾರಣೆ ಎಂದೇ ಬಣ್ಣಿಸಲಾಗಿರುವ ಸರಕು ಮತ್ತು ಸೇವಾ ತೆರಿಗೆ(ಜಿಎಎಸ್ ಟಿ) ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬರುತ್ತಿದ್ದು, ಈ ಬಗ್ಗೆ ಜನರಿಗೆ ಇರುವ ಗೊಂದಲಗಳನ್ನು ಪರಿಹರಿಸುವುದ್ಕಾಗಿ ಕೇಂದ್ರ ಸರ್ಕಾರ ಹಲವು ದೂರವಾಣಿಗಳು, ಕಂಪ್ಯೂಟರ್ ಗಳು ಹಾಗೂ ತಂತ್ರಜ್ಞರ ತಂಡವಿರುವ ಮಿನಿ ವಾರ್ ರೂಂ ಅನ್ನು ಸಿದ್ಧಪಡಿಸಿದೆ.
ಕೇಂದ್ರ ಹಣಕಾಸು ಸಚಿವಾಲಯದಲ್ಲಿ ಈ ವಾರ್ ರೂಂ ಸ್ಥಾಪಿಸಲಾಗಿದ್ದು, ಜುಲೈ 1ರಿಂದ ಜಾರಿಗೆ ಬರುವ ಜಿಎಸ್ ಟಿ ಬಗ್ಗೆ ಯಾವುದೇ ಗೊಂದಲಗಳಿದ್ದರೆ, ವಿಶೇಷವಾಗಿ ಸರ್ಕಾರಿ ಅಧಿಕಾರಿಗಳು ತಕ್ಷಣವೇ ಇಲ್ಲಿಗೆ ಕರೆ ಮಾಡಿ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾಗಿ ಎಂದು ಸೆಂಟ್ರಲ್ ಬೋರ್ಡ್ ಆಫ್ ಎಕ್ಸೈಸ್ ಮತ್ತು ಕಸ್ಟಮ್ಸ್ ಮುಖ್ಯಸ್ಥೆ ವನಜಾ ಎನ್ ಸರ್ನಾ ಅವರು ಹೇಳಿದ್ದಾರೆ.
ವಿಶೇಷವಾಗಿ ಸರ್ಕಾರಿ ಅಧಿಕಾರಿಗಳಿಗಾಗಿ ಹಣಕಾಸು ಸಚಿವಾಲಯ ಜಿಎಸ್ ಟಿ ಫೀಡ್ ಬ್ಯಾಕ್ ಮತ್ತು ಕ್ರಮ ಕೊಠಡಿಯನ್ನು ಸ್ಥಾಪಿಸಿದ್ದು, ಇದು ಬೆಳಗ್ಗೆ 8ರಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಇಲ್ಲಿಗೆ ಕರೆ ಮಾಡಿ ಜಿಎಸ್ ಟಿ ಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
SCROLL FOR NEXT