ಸಂಗ್ರಹ ಚಿತ್ರ 
ವಾಣಿಜ್ಯ

ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ನಿವೃತ್ತಿ

ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರ ಸರ್ಕಾರದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಅವರು ಬುಧವಾರ ನಿವೃತ್ತರಾಗಿದ್ದಾರೆ.

ನವದೆಹಲಿ: ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರ ಸರ್ಕಾರದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಅವರು ಬುಧವಾರ ನಿವೃತ್ತರಾಗಿದ್ದಾರೆ.

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಶಕ್ತಿಕಾಂತ್ ದಾಸ್ ಅವರಿಗೆ ಬೀಳ್ಗೊಡುಗೆ ನೀಡಲಾಯಿತು. ಕಳೆದ 37 ವರ್ಷಗಳ ಕಾಲ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ  ಶಕ್ತಿಕಾಂತ್ ದಾಸ್ ಅವರನ್ನು ಕೇಂದ್ರ ಸರ್ಕಾರ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ನೇಮಕ ಮಾಡಿತ್ತು.

ನಿನ್ನೆ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಶಕ್ತಿಕಾಂತ್ ದಾಸ್ ಅವರು, "ನಾನೂ ಕೂಡ ಸರ್ಕಾರದ ಒಂದು ಭಾಗವಾಗಿ ಸೇವೆ ಸಲ್ಲಿಸಿರುವುದು ನನಗೆ ಅತೀವ ಗೌರವ ತಂದಿದೆ. ಪ್ರಮುಖವಾಗಿ ಕಳೆದ ಮೂರು  ವರ್ಷಗಳಲ್ಲಿನ ಕಾರ್ಯ ನನಗೆ ತೃಪ್ತಿ ತಂದಿದೆ. ಸರ್ಕಾರದ ಪ್ರಮುಖ ಆರ್ಥಿಕ ಸುಧಾರಣೆಗಳು ಮತ್ತು ರಚನಾತ್ಮಕ ಬದಲಾವಣೆಗಳ ಪ್ರಕ್ರಿಯೆಯಲ್ಲಿ ಭಾಗಿಯಾಗಿದೆ. ಇದು ನನ್ನ ಅದೃಷ್ಟವೇ ಸರಿ. ನನ್ನ ಕೆಲಸ ಶೇ.100ರಷ್ಟು ತೃಪ್ತಿ  ತಂದಿದೆ. ಸರ್ಕಾರದೊಂದಿಗೆ ಕೂಡಿ ತರಲಾದ ಪ್ರಮುಖ ಸುಧಾರಣೆಗಳಲ್ಲಿ ನಾನು ಭಾಗಿಯಾಗಿದ್ದೆ" ಎಂದು ಹೇಳಿದ್ದಾರೆ.

"ಅಂತೆಯೇ ಮುಂದೆಯೂ ಕೂಡ ಅಗತ್ಯ ಬಿದ್ದರೆ ಸರ್ಕಾರಕ್ಕೆ ಸೇವೆ ಸಲ್ಲಿಸಲು ಸಿದ್ಧ..ಆರ್ಥಿಕ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟರ್ ನಲ್ಲಿ ಕಾರ್ಯ ನಿರತನಾಗಿರುತ್ತೇನೆ ಮತ್ತು ಖಾಸಗಿ ವ್ಯಕ್ತಿಯಾಗಿ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ"  ಎಂದು ಅವರು ತಿಳಿಸಿದರು.

ಇನ್ನು ಶಕ್ತಿಕಾಂತ್ ದಾಸ್ ಅವರ ನಿವೃತ್ತಿ ಬಳಿಕ ತೆರವಾಗಲಿರುವ  ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಹುದ್ದೆಯನ್ನು ಕಾರ್ಪೊರೇಟ್ ವ್ಯವಹಾರಗಳ ಕಾರ್ಯದರ್ಶಿ ತಪನ್ ರಾಯ್ ಅವರು ಅಲಂಕರಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು