ಸಾಂದರ್ಭಿಕ ಚಿತ್ರ 
ವಾಣಿಜ್ಯ

ನೋಟ್ ನಿಷೇಧ: ಸುಮಾರು 20 ಸಾವಿರ ಐಟಿ ರಿಟರ್ನ್ಸ್ ಕುರಿತು ವಿಸ್ತೃತ ತನಿಖೆ

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ನವೆಂಬರ್ 8ರಂದು 500 ಹಾಗೂ 1000 ರುಪಾಯಿ ನೋಟ್ ಗಳನ್ನು ನಿಷೇಧಿಸಿದ....

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ನವೆಂಬರ್ 8ರಂದು 500 ಹಾಗೂ 1000 ರುಪಾಯಿ ನೋಟ್ ಗಳನ್ನು ನಿಷೇಧಿಸಿದ ನಂತರ ಸಲ್ಲಿಕೆಯಾದ ಆದಾಯ ತೆರಿಗೆ ರಿಟರ್ನ್ಸ್ ಪೈಕಿ 20, 572 ರಿಟರ್ನ್ಸ್ ಕುರಿತು ವಿಸ್ತೃತ ತನಿಖೆ ನಡೆಸಲು ಆದಾಯ ತೆರಿಗೆ ಇಲಾಖೆ ನಿರ್ಧರಿಸಿದೆ ಎಂದು ಹಿರಿಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ತೆರಿಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಸುಮಾರು ಒಂದು ಲಕ್ಷ ಮಂದಿಯನ್ನು 'ಹೈ ರಿಸ್ಕ್' ಪಟ್ಟಿಗೆ ಸೇರಿಸಿದೆ ಎಂದು ಅವರು ಹೇಳಿದ್ದಾರೆ.
ಮೂಲಗಳ ಪ್ರಕಾರ, 20, 572 ಐಟಿ ರಿಟರ್ನ್ಸ್ ಗಳಲ್ಲಿ ನೋಟ್ ನಿಷೇಧಕ್ಕೂ ಮುನ್ನ ಮತ್ತು ನೋಟ್ ನಿಷೇಧದ ನಂತರ ಭಾರಿ ವ್ಯತ್ಯಾಸ ಕಂಡು ಬಂದಿದ್ದು, ಆ ಕುರಿತು ವಿಸ್ತೃತ ತನಿಖೆಗೆ ಇಲಾಖೆ ನಿರ್ಧರಿಸಿದೆ.
ನೋಟು ನಿಷೇಧ ಬಳಿಕ ಅಂದರೆ ಕಳೆದ ಜನವರಿ 31ರಿಂದ ಕೇಂದ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಆಪರೇಷನ್ ಕ್ಲೀನ್ ಮನಿ ಕಾರ್ಯಾಚರಣೆ ಆರಂಭಿಸಿದ್ದು, ಈ ಕಾರ್ಯಾಚರಣೆಯಲ್ಲಿ ಶಂಕಾಸ್ಪದ ವಹಿವಾಟುದಾರರು ಮತ್ತು ನೋಟು ನಿಷೇಧ ಬಳಿಕ 2 ಲಕ್ಷಕ್ಕಿಂತ ಅಧಿಕ ಹಣವನ್ನು ಬ್ಯಾಂಕ್ ಗಳಿಗೆ ಠೇವಣಿ ಮಾಡಿದವರ ಮೇಲೆಯೂ ನಿಗಾ ಇರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್