ಅರುಣ್ ಜೇಟ್ಲಿ 
ವಾಣಿಜ್ಯ

ಸರ್ಕಾರ ಬಂಡವಾಳದಾರರ ಸಾಲ ಮನ್ನ ಮಾಡಿಲ್ಲ: ಅರುಣ್ ಜೆಟ್ಲಿ

ಸರ್ಕಾರ ಬಂಡವಾಳದಾರರ ಸಾಲ ಮನ್ನಾ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ಸರ್ಕಾರ ಬಂಡವಾಳದಾರರ ಸಾಲ ಮನ್ನಾ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. 
ಬಂಡವಾಳದಾರರ ಸಾಲವನ್ನು ಮನ್ನಾ ಮಾಡಲಾಗಿದೆ ಎಂಬ ವದಂತಿಗಳ ಬಗ್ಗೆ ಅರುಣ್ ಜೇಟ್ಲಿ ತಮ್ಮ ಬ್ಲಾಗ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಈಗ ಎನ್ ಪಿಎ ಆಗಿರುವ ಲೋನ್ ಗಳನ್ನು 2008-2014 ರ ಅವಧಿಯಲ್ಲಿ ಯಾರ ಆದೇಶದಂತೆ ಮಂಜೂರು ಮಾಡಲಾಗಿತ್ತು ಎಂದು ಅರುಣ್ ಜೇಟ್ಲಿ ಪ್ರಶ್ನಿಸಿದ್ದಾರೆ. 
ಯಾರ ಆಣತಿ, ಒತ್ತಡಕ್ಕೆ ಮಣಿದು 2008-2014 ರ ಅವಧಿಯಲ್ಲಿ ಬಂಡವಾಳದಾರರಿಗೆ ಬೃಹತ್ ಪ್ರಮಾಣದಲ್ಲಿ ಸಾಲ ಮಂಜೂರು ಮಾಡಲಾಗಿದೆ ಎಂಬುದನ್ನು ಈಗ ವದಂತಿ ಹಬ್ಬಿಸುತ್ತಿರುವವರನ್ನು ಸಾರ್ವಜನಿಕರು ಪ್ರಶ್ನಿಸಬೇಕಿದೆ ಎಂದು ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಸಾಲ ಪಡೆದವರು ವಾಪಸ್ ನೀಡುವುದು ತಡವಾದಾಗ ಹಿಂದಿನ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು ಎಂಬುದನ್ನೂ ಸಾರ್ವಜನಿಕರು ಪ್ರಶ್ನಿಸಬೇಕಿದೆ ಎಂದು ಜೇಟ್ಲಿ ಹ್ಜೇಳಿದ್ದು,  ಎನ್ ಡಿಎ ಸರ್ಕಾರ ಬಂಡವಾಳದಾರರ ಸಾಲ ಮನ್ನಾ ಮಾಡಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT