ನವದೆಹಲಿ: ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ ಮುಂಚೂಣಿಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಅಧ್ಯಕ್ಷರನ್ನಾಗಿ ರಜನೀಶ್ ಕುಮಾರ್ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.
ಇದೇ 7ರಂದು ರಜನೀಶ್ ಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.
ರಜನೀಶ್ ಕುಮಾರ್ ಪ್ರಸ್ತುತ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದು ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿರುತ್ತಾರೆ.
ಒಂದು ವರ್ಷಗಳ ಅವಧಿಗೆ ವಿಸ್ತರಣೆಯಾಗಿದ್ದ ಅರುಂಧತಿ ಭಟ್ಟಚಾರ್ಯ ಅವರ ಅಧ್ಯಕ್ಷಾವಧಿ ಇದೇ ಶುಕ್ರವಾರಕ್ಕೆ ಕೊನೆಗೊಳ್ಳಲಿದೆ.