ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಾಣಿಜ್ಯ

ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತಕ್ಕೆ ರಾಜ್ಯಗಳಿಗೆ ಕೇಂದ್ರ ಸೂಚನೆ

ನಿನ್ನೆಯಷ್ಟೇ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 2 ರುಪಾಯಿ ಕಡಿತಗೊಳಿಸಿದ್ದ ಕೇಂದ್ರ ಸರ್ಕಾರ ಇದೀಗ ರಾಜ್ಯ ಸರ್ಕಾರಗಳಿಗೆ...

ಪೆಟ್ರೋಲ್ ಬಂಕ್
Vishwanath S
Updated On : 4 Oct 2017, 6:51 am
ನವದೆಹಲಿ: ನಿನ್ನೆಯಷ್ಟೇ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 2 ರುಪಾಯಿ ಕಡಿತಗೊಳಿಸಿದ್ದ ಕೇಂದ್ರ ಸರ್ಕಾರ ಇದೀಗ ರಾಜ್ಯ ಸರ್ಕಾರಗಳಿಗೆ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸುವಂತೆ ಹೇಳಿದೆ. 
ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜ್ಯ ಸರ್ಕಾರಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಶೇ.5ರಷ್ಟು ಕಡಿತಗೊಳಿಸುವಂತೆ ಸೂಚಿಸಲಾಗಿದೆ ಎಂದರು. 
2 ರುಪಾಯಿ ಅಬಕಾರಿ ಸುಂಕ ಕಡಿತದಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 26 ಸಾವಿರ ಕೋಟಿ ರುಪಾಯಿ ಹೊರೆ ಬೀಳಲಿದೆ. ಉಳಿದಿರುವ ಅವಧಿಗೆ 13 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ.

Advertisement

Advertisement

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿತ್ತು. ಸದ್ಯ ಪೆಟ್ರೋಲ್ ಮೇಲೆ ಕೇಂದ್ರ ಸರ್ಕಾರ ಪ್ರತಿ ಲೀಟರ್ ಗೆ 21.48 ರುಪಾಯಿ ಹಾಗೂ ಡೀಸೆಲ್ ಮೇಲೆ ಪ್ರತಿ ಲೀಟರ್ 17.33 ರುಪಾಯಿ ಅಬಕಾರಿ ಸುಂಕ ವಿಧಿಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement