ವೆಂಕಯ್ಯ ನಾಯ್ಡು 
ವಾಣಿಜ್ಯ

ಆರ್ಥಿಕತೆಯ ಬಗ್ಗೆ ಚರ್ಚೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದು: ವೆಂಕಯ್ಯ ನಾಯ್ಡು

ಪ್ರಸ್ತುತ ದೇಶದ ಆರ್ಥಿಕತೆಯ ಬಗ್ಗೆ ನಡೆಯುತ್ತಿರುವ ಚರ್ಚೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. g

ನವದೆಹಲಿ: ಪ್ರಸ್ತುತ ದೇಶದ ಆರ್ಥಿಕತೆಯ ಬಗ್ಗೆ ನಡೆಯುತ್ತಿರುವ ಚರ್ಚೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. 
ರೈಲ್ವೆ ಹಾಗೂ ಮೆಟ್ರೋ ಯೋಜನೆಗಳಲ್ಲಿ ತಾಂತ್ರಿಕ ಸುಧಾರಣೆಗಳ ಕುರಿತು ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿರುವ ವೆಂಕಯ್ಯ ನಾಯ್ಡು, ಆರ್ಥಿಕ ಸುಧಾರಣೆಗಳಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳು ದೀರ್ಘಾವಧಿಯಲ್ಲಿ ಅನುಕೂಲಕರವಾಗಲಿದೆ ಎಂದು ಹೇಳಿದ್ದಾರೆ. 
ಆರ್ಥಿಕತೆಯ ಬಗ್ಗೆ ಈಗ ನಡೆಯುತ್ತಿರುವ ಚರ್ಚೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಆದರೆ ಯಾವುದೇ ಬದಲಾವಣೆಯ ಸಂದರ್ಭದಲ್ಲಿ ಕೆಲವು ಏರುಪೇರುಗಳು ಉಂಟಾಗಲಿವೆ, ದೀರ್ಘಾವಧಿಯಲ್ಲಿ ಅವು ಅನುಕೂಲಕರವಾಗಲಿವೆ ಎಂಬುದನ್ನು ನಾವು ಅರಿತಿರಬೇಕು ಎಂದು ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. 
ದೇಶದಲ್ಲಿ ನಗರೀಕರಣ ವೇಗವಾದ ಬೆಳೆಯುತ್ತಿದ್ದು, ಸಮರ್ಥವಾದ, ಮಿತವ್ಯಯದ ಸಾರಿಗೆ ವ್ಯವಸ್ಥೆ ಅಗತ್ಯತೆ ಇದೆ. ಭಾರತೀಯ ರೈಲ್ವೆ ವಿಶ್ವದಲ್ಲಿಯೇ ಮೂರನೇ ಅತಿ ದೊಡ್ಡ ರೈಲ್ವೆ ವ್ಯವಸ್ಥೆಯಾಗಿದ್ದು, ಮುಂದಿನ 5 ವರ್ಷಗಳಲ್ಲಿ ಶೇ.10 ರಷ್ಟು ಜಾಗತಿಕ ಮಾರುಕಟ್ಟೆಯನ್ನು ಹೊಂದಿರಲಿದೆ ಆದ್ದರಿಂದ ರೈಲ್ವೆ ಇಲಾಖೆಗೆ ನವೀನ ಮಾದರಿಯ ಯೋಜನೆಗಳನ್ನು ಅಳವಡಿಸಿಕೊಳ್ಳುವುದು ಮುಖ್ಯ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ