ವಾಣಿಜ್ಯ

ಗುಜರಾತ್: ಶೇ.4 ರಷ್ಟು ವ್ಯಾಟ್ ಕಡಿತ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಇಳಿಕೆ

Raghavendra Adiga
ಗಾಂಧಿನಗರ: ಭಾರತೀಯ ಜನತಾ ಪಕ್ಷದ ಆಡಳಿತವಿರುವ ಗುಜರಾತಿನಲ್ಲಿ ಇಂಧನ ಬೆಲೆಗಳ ಮೇಲೆ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತಗೊಳಿಸಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ವಿಜಯ್ ರೂಪಾನಿ ಮಾದ್ಯಮದೊಡನೆ ಮಾತನಾಡಿ, "ನಾವು ಇಂಧನದ ಮೇಲೆ  ಮೌಲ್ಯವರ್ಧಿತ ತೆರಿಗೆಯನ್ನು ಶೇ.4 ರಷ್ಟು ಕಡಿತಗೊಳಿಸಲು ನಿರ್ಧರಿಸಿದ್ದೇವೆ. ಇದರಿಂದಾಗಿ ಪೆಟ್ರೋಲ್ ದರವು 2.93 ರೂ. ಮತ್ತು ಡೀಸೆಲ್ 2.72 ರೂ.ಇಳಿಕೆ ಆಗಲಿದೆ." ಎಂದರು.
ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಇಂಧನದ ಮೇಲೆ ವ್ಯಾಟ್ ಅನ್ನು ಕಡಿತಗೊಳಿಸುವ ನಿರ್ಧಾರ ಮಾಡಲಾಗಿದೆ, ಮುಂಬರುವ ಎರಡು ಅಥವಾ ಮೂರು ದಿನಗಳಲ್ಲಿ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ರೂಪಾನಿ ಹೇಳಿದ್ದಾರೆ.
ಕೇಂದ್ರ ಸರಕಾರವು ಕಳೆದ ವಾರ, ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವುದಾಗಿ ಘೋಷಿಸಿತ್ತು. ಈ ಕ್ರಮವು "ಕಚ್ಚಾ ಪೆಟ್ರೋಲಿಯಂ ತೈಲದ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಬೆಲೆ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಮಾರಾಟದ ಬೆಲೆಯ ಮೇಲೆ ಪ್ರಭಾವ ಬೀರಲಿದೆ ಎಂದು ಹೇಳಿದರು.
ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್  ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ನ್ನು ಶೇ. 5 ರಷ್ಟು ಕಡಿತಗೊಳಿಸಲು ರಾಜ್ಯಗಳಿಗೆ ಸೂಚಿಸಿದ್ದರು.
"ರಾಜ್ಯಗಳು ಸಹ ಕೇಂದ್ರದಂತೆಯೇ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಗ್ರಾಹಕರ ಹಿತಾಸಕ್ತಿಗೆ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು" ಎಂದು ಪ್ರಧಾನ್ ಹೇಳಿದರು.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ "ಈ ಕುರಿತು ನಮ್ಮ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ದೀಪಾವಳಿಯ ಸಂಭ್ರಮಕ್ಕಾಗಿ ಕಾಯಬೇಕಿದೆ" ಎಂದರು
ಇಷ್ಟಾಗಿಯೂ ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿ ಸರ್ಕಾರವಿರುವ ಕೇರಳವು ಕೇಂದ್ರದ ಸೂಚನೆಗೆ ವಿರೋಧ ವ್ಯಕ್ತಪಡಿಸಿದೆ.
SCROLL FOR NEXT