ಉತ್ತರಾಖಂಡ್: ಪೆಟ್ರೋಲ್-ಡಿಸೇಲ್ ಮೇಲೆ 2% ವ್ಯಾಟ್ ಇಳಿಕೆ
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು 2 ರುಪಾಯಿ ಕಡಿತಗೊಳಿಸಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರಗಳು ವ್ಯಾಟ್ ದರ...
ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು 2 ರುಪಾಯಿ ಕಡಿತಗೊಳಿಸಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರಗಳು ವ್ಯಾಟ್ ದರ ಕಡಿತಗೊಳಿಸುತ್ತಿವೆ.
ಮೊದಲಿಗೆ ಗುಜರಾತ್, ಮಹಾರಾಷ್ಟ್ರ ಮತ್ತು ಹಿಮಾಚಲ ಪ್ರದೇಶಗಳು ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಿದ್ದವು ಇದೀಗ ಉತ್ತರಖಂಡ್ ಸಹ 2 ರುಪಾಯಿ ವ್ಯಾಟ್ ಅನ್ನು ಕಡಿತಗೊಳಿಸಿದೆ. 2 ರುಪಾಯಿ ವ್ಯಾಟ್ ಅನ್ನು ಕಡಿತಗೊಳಿಸಿರುವುದಾಗಿ ಉತ್ತರಖಂಡ ಹಣಕಾಸು ಸಚಿವ ಪ್ರಕಾಶ್ ಪಂತ್ ಹೇಳಿದ್ದಾರೆ.
ಮಹಾರಾಷ್ಟ್ರ ಸರ್ಕಾರವೂ ಗುಜರಾತ್ ಮಾದರಿಯಲ್ಲೇ ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ನ್ನು ಕಡಿತಗೊಳಿಸಿದ್ದು, ಪೆಟ್ರೋಲ್ ಮೇಲಿನ ವ್ಯಾಟ್ ನ್ನು 2 ರೂಪಾಯಿ ಹಾಗೂ ಡಿಸೇಲ್ ಮೇಲಿನ ವ್ಯಾಟ್ ನ್ನು 1 ರೂಪಾಯಿ ಕಡಿಮೆಗೊಳಿಸಿತ್ತು.
ಗುಜರಾತ್ ನಂತರ ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ದರವನ್ನು ಇಳಿಕೆ ಮಾಡಿದ 2 ನೇ ರಾಜ್ಯ ಮಹಾರಾಷ್ಟ್ರವಾಗಿದೆ. ಇದಾದ ನಂತರ ಹಿಮಾಚಲ ಪ್ರದೇಶ ಸಹ ವ್ಯಾಟ್ ಅನ್ನು ಕಡಿತಗೊಳಿಸಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.