ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ: ಆರ್ಬಿಐ ಸ್ಪಷ್ಟನೆ
ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಗಳಿಗೆ ಕೇಂದ್ರೀಯ ಬ್ಯಾಂಕ್ ಯಾವುದೇ ಸೂಚನೆ ನೀಡಿಲ್ಲ...
ಮುಂಬೈ: ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಗಳಿಗೆ ಕೇಂದ್ರೀಯ ಬ್ಯಾಂಕ್ ಯಾವುದೇ ಸೂಚನೆ ನೀಡಿಲ್ಲ ಎಂಬ ಮಾಧ್ಯಮಗಳ ವರದಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಆರ್ ಬಿಐ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂದು ಆರ್ ಬಿಐ ಶನಿವಾರ ಸ್ಪಷ್ಟಪಡಿಸಿದೆ.
ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಕಡ್ಡಾಯ ನಿಯಮ ಮುಂದುವರೆಯಲಿದೆ ಎಂದು ಆರ್ ಬಿಐ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕೇಂದ್ರ ಸರ್ಕಾರ ಕಳೆದ ಜೂನ್ ನಲ್ಲಿ ಜಾರಿಗೆ ತಂದ ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಈಗಲೂ ಜಾರಿಯಲ್ಲಿದ್ದು, ಬ್ಯಾಂಕ್ ಗಳು ನಮ್ಮಿಂದ ಯಾವುದೇ ಸೂಚನೆಗಳಿಗೆ ಕಾಯದೇ ಯಥಾವತ್ತಾಗಿ ಅದನ್ನು ಜಾರಿಗೊಳಿಸಬೇಕು ಎಂದು ಆರ್ ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಎರಡು ದಿನಗಳ ಹಿಂದಷ್ಟೇ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯಗೊಳಿಸುವ ವಿಚಾರ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದಾಗಿದ್ದು, ಇದರಲ್ಲಿ ಕೇಂದ್ರೀಯ ಬ್ಯಾಂಕ್ ನ ಪಾತ್ರವಿಲ್ಲ ಮತ್ತು ಈ ಸಂಬಂಧ ತಾನು ಬ್ಯಾಂಕ್ ಗಳಿಗೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಆರ್ ಬಿಐ ಆರ್ ಟಿಐ ಅರ್ಜಿಗೆ ಉತ್ತರಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿದ್ದವು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.