ದೀಪಾವಳಿ ವೇಳೆಗೆ ಏರ್ ಟೆಲ್ 4 ಜಿ ಸ್ಮಾರ್ಟ್ ಫೋನ್ ಬಿಡುಗಡೆ ಸಾಧ್ಯತೆ
ಭಾರತದ ಅತಿ ದೊಡ್ಡ ಟೆಲಿಕಾಮ್ ಆಪರೇಟರ್ ಭಾರತಿ ಏರ್ ಟೆಲ್ ಸಂಸ್ಥೆ ರಿಲಾಯನ್ಸ್ ಜಿಯೋಗೆ ಪೈಪೋಟಿ ನೀಡಲು ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು, ಏರ್ ಟೆಲ್ ನ 4 ಜಿ ಸ್ಮಾರ್ಟ್ ಫೋನ್ ನ್ನು ಬಿಡುಗಡೆ ಮಾಡಲು...
ನವದೆಹಲಿ: ಭಾರತದ ಅತಿ ದೊಡ್ಡ ಟೆಲಿಕಾಮ್ ಆಪರೇಟರ್ ಭಾರತಿ ಏರ್ ಟೆಲ್ ಸಂಸ್ಥೆ ರಿಲಾಯನ್ಸ್ ಜಿಯೋಗೆ ಪೈಪೋಟಿ ನೀಡಲು ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು, ಏರ್ ಟೆಲ್ ನ 4 ಜಿ ಸ್ಮಾರ್ಟ್ ಫೋನ್ ನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.
4 ಜಿ ಸ್ಮಾರ್ಟ್ ಫೋನ್ ಗಾಗಿ ಹ್ಯಾಂಡ್ ಸೆಟ್ ತಯಾರಕ ಸಂಸ್ಥೆಗಳೊಂದಿಗೆ ಏರ್ ಟೆಲ್ ಮಾತುಕತೆ ನಡೆಸಿದ್ದು, ದೀಪಾವಳಿ ವೇಳೆಗೆ ಏರ್ ಟೆಲ್ ಸ್ಮಾರ್ಟ್ ಫೋನ್ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು. ಏರ್ ಟೆಲ್ ಸ್ಮಾರ್ಟ್ ಫೋನ್ ನ ಬೆಲೆ 2,500-2,700 ರೂಗಳಷ್ಟಿರಲಿದ್ದು ರಿಲಾಯನ್ಸ್ ಜಿಯೋಗೆ ಪೈಪೋಟಿ ನೀಡುವ ಉದ್ದೇಶ ಹೊಂದಿದೆ.
4 ಜಿ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಿದ ನಂತರ ಏರ್ ಟೆಲ್ ಆಕರ್ಷಕ 4 ಜಿ ಡಾಟಾ ಯೋಜನೆಯನ್ನು ಘೋಷಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 4 ಇಂಚಿನ ಪರದೆ 1 ಜಿಬಿ ರ್ಯಾಮ್, ಆಂಡ್ರಾಯ್ಡ್ ಒಎಸ್ ನ್ನು ಹೊಂದಿರಲಿದೆ ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.