ನವದೆಹಲಿ: ಹಣದುಬ್ಬರ ನಿಯಂತ್ರಣದಲ್ಲಿದೆ ಎಂದು ಹೇಳಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ, ಆರ್ಥಿಕತೆಯನ್ನು ಮೇಲೆತ್ತುವುದಕ್ಕೆ ಕೇಂದ್ರ ಸರ್ಕಾರ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಜಿಡಿಪಿ ದರ ಕಳೆದ 3 ವರ್ಷಗಳಲ್ಲಿಯೇ ಶೇ.5.7 ಕ್ಕೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಮಾಲೋಚನೆ ನಡೆಸಿ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ರೀತಿಯಲ್ಲಿ ಕೇಂದ್ರ ಸರ್ಕಾರ ಕ್ರಮಗಳನ್ನು ಕೈಗೊಳ್ಳುವುದಾಗಿ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಆರ್ಥಿಕ ಬೆಳವಣಿಗೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಹಿರಿಯ ಸಚಿವರುಗಳೊಂದಿಗೆ ಸಮಾಲೋಚನೆ ನಡೆಸಿರುವ ಅರುಣ್ ಜೇಟ್ಲಿ ಆರ್ಥಿಕ ಬಲವರ್ಧನೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ.