ವಾಣಿಜ್ಯ

ಆರ್ಥಿಕ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರದಿಂದ 50 ಸಾವಿರ ಕೋಟಿ ರು.ಪ್ಯಾಕೇಜ್‌

Lingaraj Badiger
ನವದೆಹಲಿ: ಇತ್ತೀಚಿನ ದಿನಗಳಲ್ಲಿ ದೇಶದ ಆರ್ಥಿಕ ಬೆಳವಣಿಗೆ(ಜಿಡಿಪಿ) ದರ ಕುಸಿತದ ಹಾದಿಯಲ್ಲಿ ಸಾಗಿದ್ದು, ಇದನ್ನು ತಡೆಯುವುದಕ್ಕಾಗಿ ಕೇಂದ್ರ ಸರ್ಕಾರ 50 ಸಾವಿರ ಕೋಟಿ ರುಪಾಯಿ ಉತ್ತೇಜನಾ ಪ್ಯಾಕೇಜ್‌ ನೀಡಲು ಮುಂದಾಗಿದೆ ಎಂದು ಸರ್ಕಾರದ ಇಬ್ಬರು ಹಿರಿಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ದೇಶದ ಆರ್ಥಿಕ ಬೆಳವಣಿಗೆ(ಜಿಡಿಪಿ) ದರ 5.7ಕ್ಕೆ ಕುಸಿಯುವ ಮೂಲಕ ಮೂರು ವರ್ಷ ಹಿಂದಕ್ಕೆ ಹೋಗಿದ್ದು, ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಆರ್ಥಿಕ ವ್ಯವಸ್ಥೆಯನ್ನು ಮತ್ತೆ ಸರಿ ದಾರಿಗೆ ತರಲು ಕೇಂದ್ರ ಸರ್ಕಾರ ಉತ್ತೇಜನಾ ಪ್ಯಾಕೇಜ್‌ ಘೋಷಿಸಲು ಸಿದ್ಧತೆ ನಡೆಸಿದೆ ಎಂದು ಹೇಳಿದ್ದರು.
ಯಾವ, ಯಾವ ವಲಯಗಳಿಗೆ ಪ್ಯಾಕೇಜ್‌ ದೊರೆಯಲಿದೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಅರುಣ್‌ ಜೇಟ್ಲಿ ನಿರಾಕರಿಸಿದ್ದಾರೆ. ಮೂಲಗಳ ಪ್ರಕಾರ, ಜವಳಿ, ತಯಾರಿಕಾ ವಲಯ, ಚರ್ಮೋದ್ಯಮ, ಹರಳು ಮತ್ತು ಆಭರಣ ವಲಯಗಳಿಗೆ ಆರ್ಥಿಕ ಉತ್ತೇಜನ ದೊರೆಯಲಿದೆ ಎನ್ನಲಾಗಿದೆ. ಇನ್ನೂ ಕೆಲವು ಉದ್ಯಮ ಕ್ಷೇತ್ರಗಳಿಗೆ ಫೆಬ್ರುವರಿಯಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ ಪ್ಯಾಕೇಜ್‌ ಘೋಷಿಸಬಹುದು. ಆದರೆ, ರಫ್ತು ವಲಯಕ್ಕೆ ಮಾತ್ರ ಸರ್ಕಾರ ಇನ್ನೂ ಒಂದೆರೆಡು ವಾರಗಳಲ್ಲಿ ಉತ್ತೇಜನಾ ಪ್ಯಾಕೇಜ್‌ ಘೋಷಿಸಲಿದೆ. 
SCROLL FOR NEXT