ಯಶ್ವಂತ್ ಸಿನ್ಹಾ 
ವಾಣಿಜ್ಯ

ಆರ್ಥಿಕತೆ ಅವ್ಯವಸ್ಥೆಗೆ ಜೇಟ್ಲಿ ಕಾರಣ: ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಯಶ್ವಂತ್ ಸಿನ್ಹಾ ವಾಗ್ದಾಳಿ

ದೇಶದ ಆರ್ಥಿಕತೆಯ ಬಗ್ಗೆ ಮಾತನಾಡಿರುವ ಬಿಜೆಪಿ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ, ಭಾರತದ ಆರ್ಥಿಕತೆಯಲ್ಲಿ ಈಗ ಎದುರಾಗಿರುವ ಅವ್ಯವಸ್ಥೆಗೆ ಜೇಟ್ಲಿ ಕಾರಣವಾಗಿದ್ದು, ಭಾರತದ...

ನವದೆಹಲಿ: ದೇಶದ ಆರ್ಥಿಕತೆಯ ಬಗ್ಗೆ ಮಾತನಾಡಿರುವ ಬಿಜೆಪಿ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ, ಭಾರತದ ಆರ್ಥಿಕತೆಯಲ್ಲಿ ಈಗ ಎದುರಾಗಿರುವ ಅವ್ಯವಸ್ಥೆಗೆ ಜೇಟ್ಲಿ ಕಾರಣವಾಗಿದ್ದು, ಭಾರತದ ಆರ್ಥಿಕತೆ  ಅಪಾಯದ ಅಂಚಿಗೆ ಸಿಲುಕುತ್ತಿದೆ ಎಂದು ಆರೋಪಿಸಿದ್ದಾರೆ. 
ದಿ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಬರೆದಿರುವ ಲೇಖನದಲ್ಲಿ ಅರುಣ್ ಜೇಟ್ಲಿ ಬಗ್ಗೆ ವ್ಯಂಗ್ಯವಾಡಿರುವ ಯಶ್ವಂತ್ ಸಿನ್ಹಾ, ಪ್ರಧಾನಿ ನರೇಂದ್ರ ಮೋದಿ ಬಡತನವನ್ನು ಹತ್ತಿರದಿಂದ ನೋಡಿ ಅನುಭವಿಸಿರುವುದಾಗಿ ಹೇಳುತ್ತಾರೆ. ಅವರ ಸಚಿವ ಸಂಪುಟದಲ್ಲಿ ವಿತ್ತ ಖಾತೆಯನ್ನು ನಿರ್ವಹಿಸುತ್ತಿರುವ ಅರುಣ್ ಜೇಟ್ಲಿ ಅವರು ದೇಶದ ಜನತೆಯೂ ಸಹ ಬಡತನವನ್ನು ಹತ್ತಿರದಿಂದ ನೋಡುವಂತೆ ಮಾಡಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಸಿನ್ಹಾ ಲೇವಡಿ ಮಾಡಿದ್ದಾರೆ. 
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿ ಲಕ್ಷಾಂತರ ಕೋಟಿ ರೂಪಾಯಿಗಳು ಲಾಭದಾಯಕವಾಗುವ ಸಂದರ್ಭದಲ್ಲಿ ವಿತ್ತ ಖಾತೆಯ ಹೊಣೆಯನ್ನು ಹೊತ್ತಿರುವುದು ಅರುಣ್ ಜೇಟ್ಲಿ ಅವರ ಅದೃಷ್ಟ. ಆದರೆ ಅದನ್ನು ಅರುಣ್ ಜೇಟ್ಲಿ ಕೈ ಚೆಲ್ಲಿ ಕೂತಿದ್ದು ಸಿಕ್ಕ ಅವಕಾಶವನ್ನು ವ್ಯರ್ಥ ಮಾಡಿದ್ದಾರೆ ಎಂದು ಯಶ್ವಂತ್ ಸಿನ್ಹಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಸ್ಥಗಿತಗೊಂಡಿರುವ ಯೋಜನೆಗಳು ಹಾಗೂ ಬ್ಯಾಂಕ್ ಎನ್ ಪಿಎ ವಿಷಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿತ್ತು. ಆದರೆ ರಾಜಕೀಯ ಪರಂಪರೆಗೆ ಸಂಬಂಧಿಸಿದ ಸಮಸ್ಯೆಗಳು ತೀವ್ರಗೊಂಡಿದ್ದು, ಪ್ರತಿಕೂಲ ಪರಿಣಾಮ ಬೀರುತ್ತಿದೆ. ಕೈಗಾರಿಕಾ ಉತ್ಪನ್ನ ಕುಸಿದಿದ್ದು, ಕಳೆದ 2 ದಶಕಗಳಲ್ಲಿಯೇ ಕಾಣದಷ್ಟು ಬಾರಿಗೆ ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಯಶ್ವಂತ್ ಸಿನ್ಹಾ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!