ಆನ್ ಲೈನ್ ನಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟಕ್ಕೆ ಚಿಂತನೆ: ಧರ್ಮೇಂದ್ರ ಪ್ರಧಾನ್
ಮಾಹಿತಿ ತಂತ್ರಜ್ಞಾನವನ್ನು ಸಾಕಷ್ಟು ಬಳಸಿಕೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಈಗ ಆನ್ ಲೈನ್ ನಲ್ಲೇ ಎಲ್ಲಾ ಪೆಟ್ರೋಲಿಯಂ...
ನವದೆಹಲಿ: ಮಾಹಿತಿ ತಂತ್ರಜ್ಞಾನವನ್ನು ಸಾಕಷ್ಟು ಬಳಸಿಕೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಈಗ ಆನ್ ಲೈನ್ ನಲ್ಲೇ ಎಲ್ಲಾ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ ನಡೆಸಿರುವುದಾಗಿ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ತಿಳಿಸಿದ್ದಾರೆ.
ತೈಲ ಮಾರಾಟಕ್ಕೂ ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಳ್ಳಬಹುದೇ ಎಂಬ ಬಗ್ಗೆ ಚಿಂತನೆ ನಡೆಯುತ್ತಿದೆ. ಆನ್ ಲೈನ್ ನಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟಕ್ಕೆ ಸಂಬಂಧಿಸಿದಂತೆ ಸಾಧಕ ಬಾಧಕಗಳ ಕುರಿತು ಅಧ್ಯಯನ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಧರ್ಮೇಂದ್ರ ಪ್ರಧಾನ್ ಅವರು ಹೇಳಿದ್ದಾರೆ.
ದೇಶದಲ್ಲಿ ಸದ್ಯ ನಾಲ್ಕು ಕೋಟಿ ಗ್ರಾಹಕರಿದ್ದಾರೆ. ಆದರೆ ಕೇವಲ ಒಂದು ಲಕ್ಷ ಔಟ್ ಲೆಟ್ ಗಳು ಮಾತ್ರ ಇವೆ ಎಂದು ಪೆಟ್ರೋಲಿಯಂ ಸಚಿವರು ಮಾಹಿತಿ ನೀಡಿದ್ದಾರೆ. ಅಲ್ಲದೆ ಪೆಟ್ರೋಲಿಯಂ ಉದ್ಯಮ ವರ್ಷಕ್ಕೆ 6.5ಲಕ್ಷ ಕೋಟಿ ವಹಿವಾಟು ನಡೆಸುತ್ತದೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.