ಸಾಂದರ್ಭಿಕ ಚಿತ್ರ 
ವಾಣಿಜ್ಯ

ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾನೂನು ಕಾರ್ಯನಿರ್ವಹಣೆಗೆ ಸರ್ಕಾರ ಅಧಿಸೂಚನೆ

ಸಾಲ ಬಾಕಿದಾರರು ತಲೆಮರೆಸಿಕೊಳ್ಳುವುದನ್ನು ತಪ್ಪಿಸಲು ಸರ್ಕಾರ ಸರಣಿ ನಿಯಮಗಳನ್ನು ಜಾರಿಗೆ ...

ನವದೆಹಲಿ: ಸಾಲ ಬಾಕಿದಾರರು ತಲೆಮರೆಸಿಕೊಳ್ಳುವುದನ್ನು ತಪ್ಪಿಸಲು ಸರ್ಕಾರ ಸರಣಿ ನಿಯಮಗಳನ್ನು ಜಾರಿಗೆ ತಂದಿದ್ದು, ದೇಶಭ್ರಷ್ಟ ಆರ್ಥಿಕ ವಂಚನೆ ಕಾನೂನನ್ನು ಕಾರ್ಯಗತಗೊಳಿಸಲು ರಾಷ್ಟ್ರಪತಿಗಳು ಕಳೆದ ವಾರ ವಿಧೇಯಕವೊಂದನ್ನು ಪ್ರಚುರಪಡಿಸಿದರು.

ದೇಶಭ್ರಷ್ಟ ಆರ್ಥಿಕ ವಂಚನೆ ವಿಧೇಯಕ-2018 ಎಂದು ಇದಕ್ಕೆ ಹೆಸರಿಡಲಾಗಿದ್ದು, ಭಾರತೀಯ ಕಾನೂನಿನಲ್ಲಿ ನ್ಯಾಯಾಲಯದಿಂದ ಹೊರಗೆ ಕಾನೂನಿನ ಪ್ರಕ್ರಿಯೆಯಿಂದ ತಪ್ಪಿಸದಂತೆ ಆರ್ಥಿಕ ಅಪರಾಧಿಯನ್ನು ತಡೆಗಟ್ಟುತ್ತದೆ.

ಬ್ಯಾಂಕುಗಳಿಂದ ಸಾಲ ತೆಗೆದುಕೊಂಡು ಹಿಂತಿರುಗಿಸದೆ ವಂಚಿಸುವವರಿಂದ ಸಾಲ ಮರುಪಾವತಿ ಮಾಡಿಸಿಕೊಳ್ಳುವುದು ಮತ್ತು ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಈ ಕಾನೂನು ನೆರವಾಗಲಿದೆ.

ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಕೋಟ್ಯಂತರ ರೂಪಾಯಿ ನಷ್ಟಮಾಡಿ ದೇಶಬಿಟ್ಟು ಹೋದ ಪ್ರಕರಣದ ನಂತರ ಹಣಕಾಸು ಸಚಿವಾಲಯ ಇಂತಹ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.

ಆರ್ಥಿಕ ಅಪರಾಧ ಕಾನೂನಿನಡಿಯಲ್ಲಿ ಸಹಾಯಕ ನಿರ್ದೇಶಕರು ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಮ್ಮ ಅಧಿಕಾರ ಬಳಸಿ ಆರ್ಥಿಕ ಭ್ರಷ್ಟಾಚಾರರ ದಾಖಲೆಗಳು/ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು. ಜಾರಿ ನಿರ್ದೇಶನಾಲಯದ ಸ್ಥಳೀಯ ಕಚೇರಿಯ ವಿಶೇಷ ನಿರ್ದೇಶಕರು ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹಣಕಾಸು ಸಚಿವಾಲಯದ ಮತ್ತೊಂದು ಅಧಿಸೂಚನೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ