ಜಿಡಿಪಿ ಡಾಟಾ ಸಂಭ್ರಮಿಸುತ್ತಿರುವ ಬಿಜೆಪಿ ವಿರುದ್ಧ ಚಿದಂಬರಂ ಲೇವಡಿ
ಜಿಡಿಪಿ ಡಾಟ ಸಂಭ್ರಮಿಸುತ್ತಿರುವ ಬಿಜೆಪಿ ವಿರುದ್ಧ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಲೇವಡಿ ಮಾಡಿದ್ದಾರೆ.
ನವದೆಹಲಿ: ಜಿಡಿಪಿ ಡಾಟ ಸಂಭ್ರಮಿಸುತ್ತಿರುವ ಬಿಜೆಪಿ ವಿರುದ್ಧ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಲೇವಡಿ ಮಾಡಿದ್ದಾರೆ.
ಮೊದಲನೇ ತ್ರೈಮಾಸಿಕದ ಜಿಡಿಪಿಗಿಂತ 2 ನೇ ತ್ರೈಮಾಸಿಕದ ಜಿಡಿಪಿ ಬೆಳವಣಿಗೆ ಶೇ.1 ರಷ್ಟು ಕಡಿಮೆಯಾಗಿದೆ. ಈಗ ಜಿಡಿಪಿ ಬೆಳವಣಿಗೆ ಕುಸಿದಿರುವುದು ಕಳೆದ ಮೂರು ತಿಂಗಳ ಹಿಂದೆ ಜಿಡಿಪಿ ಏರಿಕೆಯಾದಾಗ ಇದ್ದ ಬಿಜೆಪಿಯ ಸಂಭ್ರಮಾಚರಣೆಯನ್ನು ಅನುಮೋದಿಸುವಂತಿಲ್ಲ ಎಂದು ಚಿದಂಬರಂ ಹೇಳಿದ್ದಾರೆ.
ಇನ್ನು ಮೂರು ಹಾಗೂ ನಾಲ್ಕನೇ ತ್ರೈಮಾಸಿಕ ವರದಿಯ ಬಗ್ಗೆಯೂ ಭವಿಷ್ಯ ನುಡಿದಿರುವ ಚಿದಂಬರಂ, 3-4 ನೇ ತ್ರೈಮಾಸಿಕದಲ್ಲೂ ಜಿಡಿಪಿ ಬೆಳವಣಿಗೆ ಇದೇ ರೀತಿಯಲ್ಲಿರುತ್ತದೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.