ಶಕ್ತಿಕಾಂತ್ ದಾಸ್ 
ವಾಣಿಜ್ಯ

ಆರ್ ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕ

ಉರ್ಜಿತ್ ಪಟೇಲ್ ಅವರು ವೈಯಕ್ತಿಕ ಕಾರಣಗಳಿಂದ ಆರ್ ಬಿಐ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರುದಿನವೇ ಕೇಂದ್ರ ...

ನವದೆಹಲಿ: ಉರ್ಜಿತ್ ಪಟೇಲ್ ಅವರು ವೈಯಕ್ತಿಕ ಕಾರಣಗಳಿಂದ ಆರ್ ಬಿಐ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರುದಿನವೇ ಕೇಂದ್ರ ಸರ್ಕಾರ ಶಕ್ತಿಕಾಂತ್ ದಾಸ್ ಅವರನ್ನು ನೂತನ ಆರ್ ಬಿಐ ಗವರ್ನರ್ ಆಗಿ ನೇಮಕ ಮಾಡಿದೆ.
ಆರ್ಥಿಕ ವ್ಯವಹಾರಗಳ ಮಾಜಿ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಅವರು ಆರ್ ಬಿಐನ 25ನೇ ಗವರ್ನರ್ ಆಗಿ ನೇಮಕಗೊಂಡಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿಯಾಗಿರುವ ಶಕ್ತಿಕಾಂತ್ ದಾಸ್ ಅವರನ್ನು ಮೂರು ವರ್ಷಗಳ ಅವಧಿಗೆ ಆರ್ ಬಿಐ ಗವರ್ನರ್ ಆಗಿ ನೇಮಕ ಮಾಡಲಾಗಿದ್ದು, ಸಂಪುಟ ನೇಮಕಾತಿ ಸಮಿತಿ ಇಂದು ಒಪ್ಪಿಗೆ ಸೂಚಿಸಿದೆ.
ಎನ್ ಪಿಎ ಹಾಗೂ ಆರ್ ಬಿಐ ಸೆಕ್ಷನ್ 7 ರ ಸಂಬಂಧ ಆರ್ ಬಿಐ-ಕೇಂದ್ರ ಸರ್ಕಾರದ ನಡುವಿನ ತಿಕ್ಕಾಟದ ನಡುವೆ ಆರ್ ಬಿಐ ಗವರ್ನರ್ ಆಗಿದ್ದ ಉರ್ಜಿತ್ ಪಟೇಲ್ ಅವರು ನಿನ್ನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!