ಅಕ್ಟೋಬರ್ ತಿಂಗಳ ಕೈಗಾರಿಕಾ ಉತ್ಪಾದನೆ ಶೇ.8.1 ಕ್ಕೆ ಏರಿಕೆ
ಅಕ್ಟೋಬರ್ ತಿಂಗಳಲ್ಲಿ ಭಾರತದ ಕೈಗಾರಿಕಾ ಉತ್ಪಾದನೆ ಶೇ.8.1 ಕ್ಕೆ ಏರಿಕೆಯಾಗಿದ್ದು, ಕಳೆದ 11 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಉತ್ಪಾದನಾ ಅಂಕಿ-ಅಂಶ ದಾಖಲಾಗಿದೆ.
ನವದೆಹಲಿ: ಅಕ್ಟೋಬರ್ ತಿಂಗಳಲ್ಲಿ ಭಾರತದ ಕೈಗಾರಿಕಾ ಉತ್ಪಾದನೆ ಶೇ.8.1 ಕ್ಕೆ ಏರಿಕೆಯಾಗಿದ್ದು, ಕಳೆದ 11 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಉತ್ಪಾದನಾ ಅಂಕಿ-ಅಂಶ ದಾಖಲಾಗಿದೆ.
ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಕೈಗಾರಿಕಾ ಉತ್ಪನ್ನ ಶೇ.1.8 ರಷ್ಟು ಏರಿಕೆಯಾಗಿತ್ತು. ಈ ವರ್ಷ ಬಂಡವಾಳ ಹಾಗೂ ಗ್ರಾಹಕ ಬಳಕೆಯ ಸರಕುಗಳ ಉತ್ಪಾದನೆ ಹೆಚ್ಚಳದಿಂದಾಗಿ ಕೈಗಾರಿಕಾ ಉತ್ಪಾದನೆಯೂ ಏರಿಕೆ ಕಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.