ಶಕ್ತಿಕಾಂತ್ ದಾಸ್ 
ವಾಣಿಜ್ಯ

ಆರ್ ಬಿಐ ಸ್ವಾಯತ್ತತೆ, ವಿಶ್ವಾಸಾರ್ಹತೆ ಎತ್ತಿ ಹಿಡಿಯಲು ಯತ್ನಿಸುವೆ: ಶಕ್ತಿಕಾಂತ್‌ ದಾಸ್

ಭಾರತೀಯ ರಿಸರ್ವ್‌ ಬ್ಯಾಂಕ್(ಆರ್ ಬಿಐ)ನ ಸ್ವಾಯತ್ತತೆ, ವಿಶ್ವಾಸಾರ್ಹತೆ ಹಾಗೂ ಸಮಗ್ರತೆಯನ್ನು ಎತ್ತಿ ಹಿಡಿಯಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಆರ್ ಬಿಐ ನೂತನ ಗವರ್ನರ್‌....

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್(ಆರ್ ಬಿಐ)ನ ಸ್ವಾಯತ್ತತೆ, ವಿಶ್ವಾಸಾರ್ಹತೆ ಹಾಗೂ ಸಮಗ್ರತೆಯನ್ನು ಎತ್ತಿ ಹಿಡಿಯಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಆರ್ ಬಿಐ ನೂತನ ಗವರ್ನರ್‌ ಶಕ್ತಿಕಾಂತ್ ದಾಸ್‌ ಅವರು ಬುಧವಾರ ಹೇಳಿದ್ದಾರೆ.
ಇಂದು ಆರ್ ಬಿಐ ನ 25ನೇ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಕ್ತಿಕಾಂತ್ ದಾಸ್ ಅವರು, ಆರ್‌ಬಿಐ ಗವರ್ನರ್‌ ಆಗಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿರುವುದನ್ನು ನಾನು ಬಲು ದೊಡ್ಡ ಗೌರವವೆಂದು ತಿಳಿಯುತ್ತೇನೆ ಎಂದರು.
ಸರ್ಕಾರ ಸೇರಿದಂತೆ ಪ್ರತಿ ಪೋಷಕರನ್ನು ವಿಶ್ವಾಸಕ್ಕೆ ಕೆಲಸ ಮಾಡುತ್ತೇನೆ. ದೇಶದ ಆರ್ಥಿಕ ಹಿತಾಸಕ್ತಿಗೆ ಅನುಗುಣವಾಗಿ ದುಡಿಯಲು ನಾನು ನನ್ನ ಶಕ್ತಿ ಮೀರಿ ಯತ್ನಿಸುತ್ತೇನೆ' ಎಂದು ಶಕ್ತಿಕಾಂತ್‌ ದಾಸ್ ಅವರು ಹೇಳಿದ್ದಾರೆ.
ದಾಸ್‌ ಅವರು 15ನೇ ಹಣಕಾಸು ಆಯೋಗದ ಹಾಲಿ ಸದಸ್ಯರು ಮತ್ತು ಆರ್ಥಿಕ ವ್ಯವಹಾರಗಳ ಸಮಿತಿಯ ಮಾಜಿ ಕಾರ್ಯದರ್ಶಿ ಆಗಿದ್ದಾರೆ.
ಊರ್ಜಿತ್‌ ಪಟೇಲ್‌ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಕೇಂದ್ರ ಸರ್ಕಾರ ಶಕ್ತಿಕಾಂತ್ ದಾಸ್ ಅವರನ್ನು ನಿನ್ನೆ ನೇಮಕ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT