ಸಂಗ್ರಹ ಚಿತ್ರ 
ವಾಣಿಜ್ಯ

ತೈಲೋತ್ಪನ್ನಗಳ ದರದಲ್ಲಿ ಅಲ್ಪ ಪ್ರಮಾಣದ ಕಡಿತ, ಇಂದಿನ ದರ ಪಟ್ಟಿ ಇಲ್ಲಿದೆ

ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಗುರುವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.

ಮುಂಬೈ: ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಗುರುವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.
ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ದರ 5 ರಿಂದ 7 ಪೈಸೆಯಷ್ಟು ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 6 ರಿಂದ 7 ಪೈಸೆಯಷ್ಟು ಇಳಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 69.74ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ 63.76 ಕ್ಕೆ ಇಳಿಕೆಯಾಗಿದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲೂ ಪ್ರತೀ ಲೀಟರ್ ಪೆಟ್ರೋಲ್ ದರ 75.33 ರೂಗಳಿಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ ಪ್ರತೀ ಲೀಟರ್ ಗೆ 66.69ಕ್ಕೆ ಇಳಿಕೆಯಾಗಿದೆ.
ಕೋಲ್ಕತಾದಲ್ಲಿ ಪೆಟ್ರೋಲ್ ದರ ಕ್ರಮವಾಗಿ  71.81 ರೂ ಗೆ ಮತ್ತು 65.49 ರೂಗಳಿಗೆ ಇಳಿಕೆಯಾಗಿದೆ. ಚೆನ್ನೈನಲ್ಲಿ ಇಂದಿನ ಪೆಟ್ರೋಲ್‌ ಬೆಲೆ 72.32 ರೂ. (6 ಪೈಸೆ ಇಳಿಕೆ), ಡೀಸೆಲ್‌ ಬೆಲೆ 67.28 ರೂ (7 ಪೈಸೆ ಇಳಿಕೆ) ಆಗಿದೆ. 
ಬೆಂಗಳೂರಿನಲ್ಲಿಂದು ಪೆಟ್ರೋಲ್ ಬೆಲೆ ರೂ.70.27
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 70.27ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 64.08  ರೂಗೆ ಇಳಿಕೆಯಾಗಿದೆ. ಈ ಬಗ್ಗೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ತನ್ನ ವೆಬ್ ಸೈಟಿನಲ್ಲಿ ಮಾಹಿತಿ ನೀಡಿದೆ. 
ಅಂತಾರಾಷ್ಟ್ರೀಯ ಕಚ್ಛಾ ತೈಲ ದರ ಇಳಿಕೆಯೇ ತೈಲದರಗಳ ಇಳಿಕೆಗೆ ಕಾರಣ ಎನ್ನಲಾಗುತ್ತಿದ್ದು, ಮುಂದಿನ ದಿನಗಳ ದರ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಉಚಿತ ಎಸ್ಎಂಎಸ್ ಮಾಡಿ, ತೈಲೋತ್ಪನ್ನಗಳ ದರ ತಿಳಿಯಿರಿ
ಇನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಂಸ್ಥೆಗೆ ಗ್ರಾಹಕರು ಎಸ್ಎಂಎಸ್ ಕಳುಹಿಸುವ ಮೂಲಕ ಆಯಾ ನಗರದಲ್ಲಿನ ದರಗಳ ಮಾಹಿತಿ ಪಡೆಯಬಹುದು. ಈ ಬಗ್ಗೆ ಸಂಸ್ಥೆ ತನ್ನ ವೆಬೈ ಸೈಟ್ ನಲ್ಲಿ ಮಾಹಿತಿ ನೀಡಿದ್ದು, ಗ್ರಾಹಕರು https://www.iocl.com/Products/PetrolDieselPrices.aspx ಗೆ ಭೇಟಿ 92249 92249 ನಂಬರ್ ಗೆ ಆಯಾ ಜಿಲ್ಲೆಯ ಕೋಡ್ ಅನ್ನು ಎಸ್ಎಂಎಸ್ ಮಾಡಿ ದರಗಳ ಮಾಹಿತಿ ಪಡೆಯಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ