ವಾಣಿಜ್ಯ

ಪಂಜಾಬ್ ಬ್ಯಾಂಕ್ ವಂಚನೆ ಹಗರಣ: ಶ್ವೇತ ಪತ್ರ ಹೊರಡಿಸುವಂತೆ ಮೋದಿಗೆ ಕಾಂಗ್ರೆಸ್ ಆಗ್ರಹ

Srinivas Rao BV
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್-ಬಿಜೆಪಿ ಪರಸ್ಪರ ವಾಕ್ಸಮರದಲ್ಲಿ ತೊಡಗಿದ್ದು, ಬ್ಯಾಂಕಿಂಗ್ ವ್ಯವಸ್ಥೆಗೆ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸುವಂತೆ ಕಾಂಗ್ರೆಸ್ ಮೋದಿ ಸರ್ಕಾರವನ್ನು ಒತ್ತಾಯಿಸಿದೆ. 
ಕಳೆದ 5 ವರ್ಷಗಳಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ 61,000 ಕೋಟಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ವಂಚನೆ ಮಾಡಿರುವವರು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ, ಆದ್ದರಿಂದ ಬ್ಯಾಂಕಿಂಗ್ ವ್ಯವಸ್ಥೆಗೆ ಸಂಬಂಧಪಟ್ಟಂತೆ ಶ್ವೇತ ಪತ್ರ ಹೊರಡಿಸುವುದು ಅಗತ್ಯ ಎಂದು ಕಾಂಗ್ರೆಸ್ ಹೇಳಿದೆ. 
ಬ್ಯಾಂಕ್ ವಂಚನೆ ಪ್ರಕರಣಗಳು ಬಯಲಿಗೆ ಬರುತ್ತಿದ್ದು, ನೀರವ್ ಮೋದಿ ಪ್ರಕರಣದ ನಂತರ ಇಂಡಿಯನ್ ಬ್ಯಾಂಕ್ಸ್ ಒಕ್ಕೂಟಕ್ಕೆ 800 ಕೋಟಿ ರೂಪಾಯಿ ಸಾಲ ನೀಡಬೇಕಿರುವ ವಿಕ್ರಮ್ ಕೊಥಾರಿ ಈಗ ನಾಪತ್ತೆಯಾಗಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಮನೀಶ್ ತಿವಾರಿ ಆರೋಪಿಸಿದ್ದಾರೆ. 
ದಿನ ಕಳೆದಂತೆ ಬ್ಯಾಂಕಿಂಗ್ ವ್ಯವಸ್ಥೆಗೆ ಮಾಡಲಾಗಿರುವ ಮೋಸ ಬಯಲಿಗೆ ಬರುತ್ತಿದ್ದು ಕಳೆದ 5 ವರ್ಷಗಳಲ್ಲಿ ಒಟ್ಟು 61,260 ಕೋಟಿ ರೂಪಾಯಿ ವಂಚನೆ ನಡೆದಿದೆ. ಆದ್ದರಿಂದ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಬೇಕೆಂದು ಸರ್ಕಾರವನ್ನು ಕಾಂಗ್ರೆಸ್ ಆಗ್ರಹಿಸಿದೆ. 
SCROLL FOR NEXT