ಬಿಡುಗಡೆಯಾದ ಹೊಸ 10 ರುಪಾಯಿ ನೋಟು 
ವಾಣಿಜ್ಯ

ಚಾಕೊಲೆಟ್ ಬಣ್ಣದ ಹೊಸ ರೂ.10 ಮುಖಬೆಲೆಯ ನೋಟು ಬಿಡುಗಡೆ ಮಾಡಿದ ಆರ್ ಬಿಐ

ಹೊಸ ವಿನ್ಯಾಸದ 2000, 500, 200 ಹಾಗೂ 50 ರುಪಾಯಿ ನಂತರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) ಶುಕ್ರವಾರ 10 ರುಪಾಯಿ...

ನವದೆಹಲಿ: ಹೊಸ ವಿನ್ಯಾಸದ 2000, 500, 200 ಹಾಗೂ 50 ರುಪಾಯಿ ನಂತರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) ಶುಕ್ರವಾರ 10 ರುಪಾಯಿ ಮುಖ ಬೆಲೆಯ ಹೊಸ ವಿನ್ಯಾಸದ ಚಾಕೊಲೆಟ್ ಬಣ್ಣದ ನೋಟುಗಳನ್ನು ಬಿಡುಗಡೆ ಮಾಡಿದೆ. 
ಕಳೆದ ವಾರ ಹೊಸ 10 ರುಪಾಯಿ ಮುಖ ಬೆಲೆಯ ನೋಟು ಮುದ್ರಣದ ವಿನ್ಯಾಸಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ಪಡೆದಿದ್ದ ಆರ್ ಬಿಐ ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಅಲ್ಲದೆ ಈಗಾಗಲೇ ಅಂದಾಜು 100 ಕೋಟಿ 10 ರುಪಾಯಿ ನೋಟುಗಳನ್ನು ಮುದ್ರಣ ಮಾಡಿದೆ ಎನ್ನಲಾಗಿದೆ.
ಮಹಾತ್ಮ ಗಾಂಧಿ ಸರಣಿಯ ಚಾಕೋಲೆಟ್ ಬಣ್ಣದ ಈ ಹೊಸ ನೋಟಿನ ಮೇಲೆ ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಸಹಿ ಹಾಗೂ ಹಿಂಬದಿಯಲ್ಲಿ ಒಡಿಶಾ ಕೊನಾರ್ಕ್​ನ ಪ್ರಸಿದ್ಧ ಸೂರ್ಯ ದೇವಾಲಯದ ಚಿತ್ರವಿದೆ. 
2016ರ ನವೆಂಬರ್ 8ರಂದು 1 ಸಾವಿರ ರೂ. ಹಾಗೂ 500 ರೂ. ನೋಟು ನಿಷೇಧದ ಬಳಿಕ ಆರ್ ಬಿಐ ಹೊಸ 500 2 ಸಾವಿರ ರುಪಾಯಿ ಮುಖ ಬೆಲೆಯ ನೋಟುಗಳನ್ನು ಬಿಡುಗಡೆಗೊಳಿಸಿತ್ತು. ನೋಟ್ ಬ್ಯಾನ್ ಬಳಿಕ ಸೃಷ್ಟಿಯಾಗಿದ್ದ ಚಿಲ್ಲರೆ ಸಮಸ್ಯೆಯನ್ನು ಬಗೆ ಹರಿಸಲು ಆಗಸ್ಟ್ ತಿಂಗಳಿನಲ್ಲಿ ಆರ್ ಬಿಐ ಹೊಸ 200 ರು. ಹಾಗೂ 50 ರು. ಮುಖ ಬೆಲೆಯ ನೋಟುಗಳನ್ನು ಬಿಡುಗಡೆಗೊಳಿಸಿತ್ತು. 200 ರು. ಮುಖ ಬೆಲೆಯ ನೋಟಿನಲ್ಲಿ ಭಾರತದ ಸಂಸ್ಕೃತಿ ಪರಂಪರೆ ತಿಳಿಸುವ ಸಲುವಾಗಿ ಸಾಂಚಿ ಸ್ತೂಪವನ್ನು ಮುದ್ರಿಸಿದ್ದರೆ, 50 ರೂ. ನೋಟಿನಲ್ಲಿ ಹಂಪಿಯ ಕಲ್ಲಿನ ರಥದ ಚಿತ್ರವನ್ನು ಮುದ್ರಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್