ಸಾಂದರ್ಭಿಕ ಚಿತ್ರ 
ವಾಣಿಜ್ಯ

ಶೀಘ್ರದಲ್ಲೇ ವಿಮಾನದಲ್ಲೂ ವೈಫೈ ಸೌಲಭ್ಯ

ಶೀಘ್ರದಲ್ಲೇ ಆಕಾಶದಲ್ಲಿ ಹಾರುತ್ತಿರುವ ವಿಮಾನದಲ್ಲೂ ಮೊಬೈಲ್‌ ಮತ್ತು ಇಂಟರ್‌ನೆಟ್‌ ಬಳಕೆಗೆ ಅವಕಾಶ ಸಿಗಲಿದೆ....

ನವದೆಹಲಿ: ಶೀಘ್ರದಲ್ಲೇ ಆಕಾಶದಲ್ಲಿ ಹಾರುತ್ತಿರುವ ವಿಮಾನದಲ್ಲೂ ಮೊಬೈಲ್‌ ಮತ್ತು ಇಂಟರ್‌ನೆಟ್‌ ಬಳಕೆಗೆ ಅವಕಾಶ ಸಿಗಲಿದೆ.
ವಿಮಾನ ಪ್ರಯಾಣದ ವೇಳೆ ಮೊಬೈಲ್ ಮತ್ತು ವೈಫೈ ಸೌಲಭ್ಯ ಬಳಸಲು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್‌) ಶುಕ್ರವಾರ ಗ್ರೀನ್ ಸಿಗ್ನಲ್ ನೀಡಿದೆ. ಅಲ್ಲದೆ ಭಾರತೀಯ ವಾಯು ವಲಯದಲ್ಲಿ ವಿಮಾನ ಸಂಚಾರದ ವೇಳೆ ಇಂಟರ್‌ನೆಟ್‌ ಮತ್ತು ಮೊಬೈಲ್‌ ಸಂವಹನಕ್ಕೆ ಅವಕಾಶ ನೀಡುವಂತೆ ಶಿಫಾರಸು ಮಾಡಿದೆ.
ವಿಮಾನದಲ್ಲಿ ಇಂಟರ್‌ನೆಟ್‌ ಸೌಲಭ್ಯ ನೀಡುವ ತಂತ್ರಜ್ಞಾನ ಈಗ ಲಭ್ಯವಿದೆ. ಇದನ್ನು ನಿರ್ಬಂಧಿಸುವ ಯಾವುದೇ ತಡೆಗಳೂ ಇಲ್ಲ. ಹಾಗಿರುವಾಗ ವಿಮಾನ ಯಾನ ಸಂಸ್ಥೆಗಳು ತಮ್ಮ ವಿಮಾನಗಳಲ್ಲಿ ಈ ಸೇವೆಗಳನ್ನು ನೀಡುವ ಬಗ್ಗೆ ಯೋಚಿಸಬಹುದು ಎಂದು ಅದು ಹೇಳಿದೆ.
ಕಳೆದ ವರ್ಷದ ಸೆಪ್ಟೆಂಬರ್‌ನಿಂದ ಉದ್ಯಮ ಮತ್ತು ಅದರ ಪಾಲುದಾರರ ಜತೆಗೆ ಹಲವಾರು ಸುತ್ತಿನ ಮಾತುಕತೆ ನಡೆಸಿದ ಬಳಿಕ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಟ್ರಾಯ್‌ ತಿಳಿಸಿದೆ. ಆದರೆ ವಿಮಾನ 3000 ಮೀಟರ್‌ಗಿಂತ ಮೇಲೆ ಹಾರಲು ಆರಂಭಿಸಿದ ಬಳಿಕ ಇಂಟರ್‌ನೆಟ್‌ ಸಂಪರ್ಕ ನೀಡಬಹುದು ಎನ್ನುವುದು ಟ್ರಾಯ್‌ ಸಲಹೆ. ವಿಮಾನ ಟೇಕಾಫ್‌ ಆಗಿ ನಾಲ್ಕೈದು ನಿಮಿಷದಲ್ಲೇ 3000 ಮೀಟರ್‌ಗಿಂತ ಹೆಚ್ಚಿನ ಎತ್ತರ ತಲುಪುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ