ವಾಣಿಜ್ಯ

ಹಂತ ಹಂತವಾಗಿ ಪೆಟ್ರೋಲಿಯಂ ಉತ್ಪನ್ನಗಳು ಜಿಎಸ್‌ಟಿ ವ್ಯಾಪ್ತಿಗೆ: ಹಸ್ಮುಖ್ ಆಧಿಯಾ

Lingaraj Badiger
ನವದೆಹಲಿ: ಹಂತ ಹಂತವಾಗಿ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ವ್ಯಾಪ್ತಿಗೆ ತರುವ ವಿಚಾರವನ್ನು ಜಿಎಸ್ ಟಿ ಮಂಡಳಿ ಪರಿಗಣಿಸಲಿದೆ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ಹಸ್ಮುಖ್ ಆಧಿಯಾ ಅವರು ಶುಕ್ರವಾರ ಹೇಳಿದ್ದಾರೆ.
ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕು ಎಂಬ ಬೇಡಿಕೆ ಇದ್ದು, ಆ ಕುರಿತು ಚರ್ಚಿಸಲಾಗುತ್ತಿದೆ. ಎಲ್ಲವೂ ಹಂತ ಹಂತವಾಗಿ ಜಾರಿಗೆ ಬರಲಿವೆ ಎಂದು ಆಧಿಯಾ ತಿಳಿಸಿದ್ದಾರೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ಅಧ್ಯಕ್ಷ ಎಸ್ ರಮೇಶ್ ಅವರು, ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕು ಎಂಬ ಬೇಡಿಕೆ ಇದೆ. ಈ ಕುರಿತು ಜಿಎಸ್ ಟಿ ಮಂಡಳಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಸದ್ಯ ಪೆಟ್ರೋಲ್, ಡೀಸೆಲ್, ಕಚ್ಚಾ ತೈಲ, ನೈಸರ್ಗಿಕ ಅನಿಲ್ ಮತ್ತು ವಾಯುಯಾನ ಟರ್ಬೈನ್ ಇಂಧನವನ್ನು ಜಿಎಸ್ ಟಿಯಿಂದ ಹೊರಗಿಡಲಾಗಿದೆ.
SCROLL FOR NEXT