ಪಿಯೂಷ್ ಗೋಯಲ್ 
ವಾಣಿಜ್ಯ

ಜಿಎಸ್ ಟಿಯಿಂದ ಒಳ್ಳೆಯದಾಗಿದೆ, ಸರ್ಕಾರಕ್ಕೆ ಸಾಕಷ್ಟು ತೆರಿಗೆ ಬಂದಿದೆ: ಪಿಯೂಷ್ ಗೋಯಲ್

ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದ ಕಳೆದ ಒಂದು ವರ್ಷದಲ್ಲಿ ತೆರಿಗೆ ಜಾರಿಯಲ್ಲಿ ...

ರಾಯ್ಪುರ್(ಛತ್ತೀಸ್ ಗಢ): ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದ ಕಳೆದ ಒಂದು ವರ್ಷದಲ್ಲಿ ತೆರಿಗೆ ಜಾರಿಯಲ್ಲಿ ಒಳ್ಳೆಯದಾಗಿದ್ದು ಸರ್ಕಾರಕ್ಕೆ ಸಾಕಷ್ಟು ಆದಾಯವನ್ನು ತಂದುಕೊಟ್ಟಿದೆ ಎಂದು ಹಣಕಾಸು ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ಛತ್ತೀಸ್ ಗಢದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕಳೆದೊಂದು ವರ್ಷದಲ್ಲಿ ಜಿಎಸ್ ಟಿ ಜಾರಿಯಿಂದ ಉತ್ತಮ ಕೆಲಸವಾಗಿದ್ದು ಸರ್ಕಾರಕ್ಕೆ ಸಾಕಷ್ಟು ಆದಾಯ ತಂದುಕೊಟ್ಟಿದೆ. ಈ ವರ್ಷ ಕೂಡ ಜನರು ಈ ತೆರಿಗೆ ವ್ಯವಸ್ಥೆಯನ್ನು ಉತ್ತಮವಾಗಿ ಅಳವಡಿಸಿಕೊಂಡು ತೆರಿಗೆಯನ್ನು ಪಾವತಿಸಿದರೆ ಸರ್ಕಾರಕ್ಕೆ ಬರುವ ಆದಾಯದಲ್ಲಿ ಕಡಿಮೆಯಾಗುವುದಿಲ್ಲ, ಜನರು ಸರ್ಕಾರಕ್ಕೆ ಸರಿಯಾಗಿ ತೆರಿಗೆ ಪಾವತಿಸಿಕೊಂಡು ಬಂದರೆ ವಸ್ತುಗಳ ದರಗಳನ್ನು ಇನ್ನಷ್ಟು ಕಡಿಮೆ ಮಾಡಲು ಸಾಧ್ಯವಾಗುತ್ತದೆ, ಆಡಳಿತ ಸುಗಮವಾಗುತ್ತದೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ತೆರಿಗೆ ಸಂಬಂಧಿತ ಕೇಸುಗಳಲ್ಲಿ ಅರ್ಧದಷ್ಟನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಕೇಸುಗಳಲ್ಲಿ ಹೆಚ್ಚಿನವು ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಿಗಳಿಗೆ ಸಂಬಂಧಿಸಿದವಾಗಿದ್ದವು ಎಂದರು.

ಉದ್ಯಮಗಳಲ್ಲಿ ಸರ್ಕಾರದ ಮಧ್ಯಪ್ರವೇಶವನ್ನು ತಡೆಯಲು ತೆರಿಗೆ ವಿಧಾನದಲ್ಲಿ ಡಿಜಿಟಲೀಕರಣವನ್ನು ತರಲಾಗುವುದು ಎಂದರು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ ವಿಧಾನ ಕಳೆದ ವರ್ಷ ಜುಲೈ 1ರಂದು ಜಾರಿಗೆ ಬಂದಿತ್ತು. ಇದೀ ದೇಶದಲ್ಲಿ ಏಕರೂಪ ತೆರಿಗೆ ವಿಧಾನವೇ ಸರಕು ಮತ್ತು ಸೇವಾ ತೆರಿಗೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!