ಸಾಂದರ್ಭಿಕ ಚಿತ್ರ 
ವಾಣಿಜ್ಯ

ವೀಸಾ ಅರ್ಜಿ ತಿರಸ್ಕಾರದಿಂದ ಯೋಜನೆ ವೆಚ್ಚ ಅಧಿಕವಾಗಿ ವಿಳಂಬತೆ ಉಂಟಾಗಬಹುದು: ಇನ್ಫೋಸಿಸ್

ಕೆಲಸದ ವೀಸಾ ಅರ್ಜಿಗಳು ತಿರಸ್ಕೃತವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಇನ್ಫೋಸಿಸ್ ಸಂಸ್ಥೆ...

ನವದೆಹಲಿ: ಕೆಲಸದ ವೀಸಾ ಅರ್ಜಿಗಳು ತಿರಸ್ಕೃತವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಇನ್ಫೋಸಿಸ್ ಸಂಸ್ಥೆ, ಇದರಿಂದ ಗ್ರಾಹಕರ ಯೋಜನೆ ವೆಚ್ಚಗಳು ಅಧಿಕವಾಗುವುದಲ್ಲದೆ ವಿಳಂಬವಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಅಮೆರಿಕಾ, ಆಸ್ಟ್ರೇಲಿಯಾ ಮೊದಲಾದ ದೇಶಗಳು, ಭಾರತೀಯ ಐಟಿ ಉದ್ಯೋಗಿಗಳಿಗೆ ಕೆಲಸದ ವೀಸಾ ನೀಡುವುದರಲ್ಲಿ ಸೂಕ್ಷ್ಮ ಪರಿಶೀಲನೆ ಮಾಡುತ್ತಿರುವುದರಿಂದ ಪ್ರಾಜೆಕ್ಟ್ ಗಳ ಕೆಲಸದಲ್ಲಿ ವಿಳಂಬವಾಗುತ್ತಿರುವುದು ಮನಗಂಡು ಪ್ರಮುಖ ಕೆಲಸದ ಮಾರುಕಟ್ಟೆಯಲ್ಲಿ ಸ್ಥಳೀಯರನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ.

ಇತ್ತೀಚಿನ ದಿನಗಳಲ್ಲಿ ವೀಸಾ ಅರ್ಜಿಗಳ ತಿರಸ್ಕಾರದಲ್ಲಿ ಹೆಚ್ಚಳವಾಗಿದೆ. ಇದರಿಂದ ಕಂಪೆನಿಯ ಕೆಲಸದ ಮೇಲೆ ಪರಿಣಾಮ ಉಂಟಾಗಿದೆ. ಈ ಪರಿಸ್ಥಿತಿ ಮುಂದುವರಿದರೆ ಸಮಯಕ್ಕೆ ಸರಿಯಾಗಿ ವೀಸಾ ಪಡೆದು ಸಿಬ್ಬಂದಿಗಳಿಂದ ಯೋಜನೆಗಳನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಪ್ರಾಜೆಕ್ಟ್ ಗಳು ವಿಳಂಬವಾಗುವುದಲ್ಲದೆ ಹೆಚ್ಚಿನ ವೆಚ್ಚವಾಗುತ್ತದೆ ಎಂದು ಇನ್ಫೋಸಿಸ್ ಹೇಳಿದೆ.

ಕಂಪೆನಿಯು ವೀಸಾಗೆ ಅವಧಿಗಿಂತ ಮೊದಲೇ ಅರ್ಜಿಗಳನ್ನು ಸಲ್ಲಿಸಬೇಕಾಗಬಹುದು ಅಥವಾ ಇಂತಹ ವೀಸಾಗಳ ನಿರ್ವಹಣೆಯಿಂದ ಹೆಚ್ಚುವರಿ ವೆಚ್ಚ ಉಂಟಾಗಬಹುದು ಎಂದು ಹೇಳಿದ್ದಾರೆ.

ಅಮೆರಿಕಾ ಸರ್ಕಾರ ವಲಸೆ ಮತ್ತು ಕೆಲಸ ಅನುಮತಿ ನಿಯಮದಲ್ಲಿ ಬದಲಾವಣೆ ತಂದರೆ ಕಂಪೆನಿಯ ಅಂತಾರಾಷ್ಟ್ರೀಯ ಕಾರ್ಯತಂತ್ರ ಮತ್ತು ಉದ್ಯಮಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದಿದೆ.

ಈ ಹಿಂದೆ ಇನ್ಫೋಸಿಸ್, ಅಮೆರಿಕಾ, ಆಸ್ಟ್ರೇಲಿಯಾ ಮೊದಲಾದ ದೇಶಗಳ ಕಠಿಣ ಕೆಲಸದ ವೀಸಾದಿಂದಾಗಿ ತನ್ನ ಉದ್ಯಮ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ, ಸ್ಥಳೀಯರನ್ನು ನೇಮಿಸಿಕೊಂಡು ಅವರಿಗೆ ಕೆಲಸದ ತರಬೇತಿ ನೀಡಲಾಗುವುದು ಎಂದು ಹೇಳಿಕೆ ನೀಡಿತ್ತು.

ಕಳೆದ ಕೆಲ ತಿಂಗಳಲ್ಲಿ ಅಮೆರಿಕಾ, ಆಸ್ಟ್ರೇಲಿಯಾ ಮೊದಲಾದ ದೇಶಗಳು ತಾತ್ಕಾಲಿಕ ಕೆಲಸ ವೀಸಾ ನೀಡಿಕೆಯಲ್ಲಿ ಕಠಿಣ ಕ್ರಮಗಳನ್ನು ಅನುಸರಿಸುತ್ತಿವೆ. ಇದರಿಂದಾಗಿ ಸಾಗರೋತ್ತರ ಭಾರತೀಯ ಐಟಿ ಕಂಪೆನಿಗಳು ವೀಸಾಗೆ ಹೆಚ್ಚು ಅವಲಂಬಿತವಾಗದೆ ಸ್ಥಳೀಯರನ್ನು ನೇಮಕ ಮಾಡಿಕೊಳ್ಳುವ ಪರಿಸ್ಥಿತಿ ಉಂಟಾಗಿದೆ.

ಎರಡು ವರ್ಷಗಳಲ್ಲಿ ಅಮೆರಿಕಾದಲ್ಲಿ ನಾಲ್ಕು ತಂತ್ರಜ್ಞಾನ ಮತ್ತು ಸಂಶೋಧನೆ ಕೇಂದ್ರಗಳನ್ನು ಸ್ಥಾಪಿಸಿ ಸುಮಾರು 10 ಸಾವಿರ ಸ್ಥಳೀಯರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಇನ್ಫೋಸಿಸ್ ಹೇಳಿತ್ತು. ಅದರಲ್ಲಿ 4 ಸಾವಿರ ಮಂದಿಗೆ ಈಗಾಗಲೇ ಕೆಲಸ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?