ಸಾಂದರ್ಭಿಕ ಚಿತ್ರ 
ವಾಣಿಜ್ಯ

ಹೂಡಿಕೆದಾರರ ಉತ್ಸಾಹ, ಸೆನ್ಸೆಕ್ಸ್‌, ನಿಫ್ಟಿ ಸಾರ್ವಕಾಲಿಕ ದಾಖಲೆ

ಮುಂಬೈ ಷೇರು ಸೂಚ್ಯಂಕ ಸೆನ್ಸೆಕ್ಸ್‌ ಹಾಗೂ ರಾಷ್ಟ್ರೀಯ ಷೇರು ಸೂಚ್ಯಂಕ ಶುಕ್ರವಾರ ಆರಂಭಿಕ ವಹಿವಾಟಿನಲ್ಲಿ 300 ಅಂಕಗಳ...

ಮುಂಬೈ: ಮುಂಬೈ ಷೇರು ಸೂಚ್ಯಂಕ ಸೆನ್ಸೆಕ್ಸ್‌ ಹಾಗೂ ರಾಷ್ಟ್ರೀಯ ಷೇರು ಸೂಚ್ಯಂಕ ಶುಕ್ರವಾರ ಆರಂಭಿಕ ವಹಿವಾಟಿನಲ್ಲಿ 300 ಅಂಕಗಳ ಭರ್ಜರಿ ಜಿಗತ ಕಾಣುವ ಮೂಲಕ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.
ಇಂದು ಬೆಳಗಿನ ಆರಂಭಿಕ ವಹಿವಾಟಿನಲ್ಲಿ 300 ಅಂಕಗಳ ಏರಿಕೆ ಕಾಣುವ ಮೂಲಕ 37,272.86 ಅಂಕಗಳ ಮಟ್ಟವನ್ನು ತಲುಪಿತು. 
ಇದೇ ವೇಳೆ ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 77 ಅಂಕಗಳ ಮುನ್ನಡೆಯನ್ನು ದಾಖಲಿಸಿ 11,237.45 ಅಂಕಗಳ ಮಟ್ಟವನ್ನು ತಲುಪಿತು.
ಕಳೆದ ಐದು ದಿನಗಳ ನಿರಂತರ ಗೆಲುವಿನ ಓಟದಲ್ಲಿ ಸೆನ್ಸೆಕ್ಸ್‌ ಒಟ್ಟು 633.41 ಅಂಕಗಳನ್ನು ಸಂಪಾದಿಸಿದೆ. 
ಏಷ್ಯನ್‌ ಷೇರು ಮಾರುಕಟ್ಟೆಗಳಲ್ಲಿ ಸ್ಥಿರತೆಯ ವಾತಾವರಣ ನೆಲೆಸಿರುವುದು ಮತ್ತು ವಿದೇಶಿ ಬಂಡವಾಳದ ಒಳಹರಿವಿನಲ್ಲಿ ದೃಢತೆ ತೋರಿಬಂದಿರುವುದು ಷೇರು ಮಾರುಕಟ್ಟೆಯ ದಾಖಲೆ ಜಿಗಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಇಂದಿನ ಆರಂಭಿಕ ವಹಿವಾಟಿನಲ್ಲಿ ಟಾಟಾ ಸ್ಟೀಲ್‌, ಐಸಿಐಸಿಐ ಬ್ಯಾಂಕ್‌, ಹೀರೋ ಮೋಟೋ ಕಾರ್ಪ್‌, ಬಜಾಜ್‌ ಆಟೋ, ಏಷ್ಯನ್‌ ಪೇಂಟ್‌, ಕೋಟಕ್‌ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌, ಟಾಟಾ ಮೋಟರ್‌, ಎಚ್‌ ಡಿ ಎಫ್ ಸಿ, ವೇದಾಂತ, ವಿಪ್ರೋ ಷೇರುಗಳು ಶೇ.3ರ ಏರಿಕೆಯನ್ನು ದಾಖಲಿಸಿದವು. 
ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 6 ಪೈಸೆಯಷ್ಟು ಸುಧಾರಿಸಿ 68.60 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz closure: ಹಾರ್ಮುಜ್ ಜಲಸಂಧಿ ಬಂದ್, ಏಷ್ಯಾದ ಬಂದರುಗಳಲ್ಲಿ ಕ್ಯೂನಲ್ಲಿ ನಿಂತ ಹಡಗುಗಳು!

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

ರಾಜ್ಯ ಸರ್ಕಾರ ನಿಯಮದ ಮಿತಿಯೊಳಗೆ ಸಾಲ ಮಾಡಿದೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು, 80 ಲಕ್ಷ ನಗದು, 1.74 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಹೆಚ್ಚುತ್ತಿರುವ ಸಬ್ಸಿಡಿ: ಗ್ರಾಮ ಪಂಚಾಯಿತಿ ಅನುದಾನಕ್ಕೆ ರಾಜ್ಯ ಸರ್ಕಾರ ಕೊಕ್- CAG ವರದಿ

SCROLL FOR NEXT