ಅರುಣ್ ಜೇಟ್ಲಿ 
ವಾಣಿಜ್ಯ

ಏ.1ರಿಂದ ಅಂತರಾಜ್ಯ ಇ–ವೇ ಬಿಲ್‌ ಜಾರಿ, ಜಿಎಸ್ ಟಿ ರಿಟರ್ನ್ಸ್ ಸಲ್ಲಿಕೆ ಅವಧಿ 3 ತಿಂಗಳು ವಿಸ್ತರಣೆ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ನೇತೃತ್ವದಲ್ಲಿ ಶನಿವಾರ ನಡೆದ ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ...

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ನೇತೃತ್ವದಲ್ಲಿ ಶನಿವಾರ ನಡೆದ ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಜಿಎಸ್ ಟಿ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಮೂರು ತಿಂಗಳು ವಿಸ್ತರಿಸಿದ್ದು, ವ್ಯಾಪಾರಿಗಳು ಜೂನ್ ವರೆಗೆ ನಿರಾಳವಾಗಿ ವಹಿವಾಟು ನಡೆಸಬಹುದು.
ಜಿಎಸ್ ಟಿ ಕೌನ್ಸಿಲ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ ಜೇಟ್ಲಿ ಅವರು, ಏಪ್ರಿಲ್ 1ರಿಂದ ರಾಜ್ಯಗಳ ಮಧ್ಯೆ ಸರಕು ಸಾಗಿಸಲು ಇ–ವೇ ಬಿಲ್‌ ಜಾರಿಗೊಳಿಸಲಾಗುತ್ತಿದೆ ಎಂದರು.
ಅಂತರಾಜ್ಯ ಇ–ವೇ ಬಿಲ್‌ ಅನ್ನು ಏ.15 ರಿಂದ ಅಂತ ಅಂತವಾಗಿ ಜಾರಿಗೊಳಿಸಲಾಗುತ್ತಿದ್ದು, ಜೂನ್ 1ರ ವೇಳೆ ಎಲ್ಲಾ ರಾಜ್ಯಗಳಲ್ಲೂ ಜಾರಿಗೆ ಬರಲಿದೆ ಎಂದರು.
ಸರಳೀಕೃತ ಜಿಎಸ್ ಟಿ ರಿಟರ್ನ್ಸ್ ಬಗ್ಗೆ ಜಿಎಸ್ ಟಿ ಕೌನ್ಸಿಲ್ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಆದರೆ ಪ್ರಸ್ತುತ ಜಿಎಸ್ ಟಿ ರಿಟರ್ನ್ಸ್ ವ್ಯವಸ್ಥೆಯನ್ನೇ ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ ಎಂದು ಜೇಟ್ಲಿ ತಿಳಿಸಿದ್ದಾರೆ.
ಏನಿದು ಇ–ವೇ ಬಿಲ್‌ ?: ಜಿಎಸ್‌ಟಿಯಲ್ಲಿ, ಸರಕುಗಳನ್ನು ರಾಜ್ಯದ ಒಳಗೆ ಮತ್ತು ರಾಜ್ಯದಿಂದ ರಾಜ್ಯಕ್ಕೆ ಸಾಗಿಸಲು ಇ–ವೇ ಬಿಲ್ ವ್ಯವಸ್ಥೆ ರೂಪಿಸಲಾಗಿದೆ.
₹50 ಸಾವಿರಕ್ಕಿಂತ ಹೆಚ್ಚಿನ ಮೊತ್ತದ ಸರಕುಗಳನ್ನು 10 ಕಿ.ಮೀ ಆಚೆಗೆ ಸಾಗಿಸುವ ಮುಂಚೆಯೇ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಸರಕು ಸಾಗಿಸುವ ದೂರ ಆಧರಿಸಿ ಬಿಲ್‌ನ ಸಿಂಧುತ್ವ ಜಾರಿಯಲ್ಲಿ ಇರುತ್ತದೆ. ಸರಕು ಸಾಗಿಸುವ ದೂರ ಆಧರಿಸಿ 1ರಿಂದ 20 ದಿನಗಳವರೆಗೆ ಸಿಂಧುತ್ವ ಹೊಂದಿರುವ ಇ–ವೇ ಬಿಲ್‌ಗಳನ್ನು ಜಿಎಸ್‌ಟಿಎನ್‌ ವಿತರಿಸಲಿದೆ.
ಸರಕುಗಳನ್ನು ಸಾಗಿಸುವವರು ತಮ್ಮ ಜತೆ ಸರಕುಪಟ್ಟಿ, ಪೂರೈಕೆ ಬಿಲ್‌ ಅಥವಾ ಇ–ವೇ ಬಿಲ್‌ ಹೊಂದಿರಬೇಕು. ತೆರಿಗೆ ಅಧಿಕಾರಿಗಳು ಮಾರ್ಗಮಧ್ಯೆ ತಪಾಸಣೆ ನಡೆಸುವ ಅಧಿಕಾರ ಹೊಂದಿರುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!