ನವದೆಹಲಿ: ದೇಶಿ ವಿಮಾನಯಾನ ಸಂಸ್ಥೆ ಏರ್ ಇಂಡಿಗೋ 42 ವಿಮಾನಗಳ ಸಂಚಾರವನ್ನು ರದ್ದುಗೊಳಿಸಿದೆ. ಇಂಜಿನ್ ನಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿದೆ.
ಮಾ.14 ರಂದು ಇಂಡಿಗೋ 42 ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದ್ದು ಮುಂಬೈ, ಕೋಲ್ಕತ್ತಾ, ಪುಣೆ, ಜೈಪುರ, ಶ್ರೀನಗರ, ಭುವನೇಶ್ವರ, ಚೆನ್ನೈ, ದೆಹಲಿ, ಡೆಹ್ರಾಡೂನ್, ಅಮೃತ್ ಸರ, ಬೆಂಗಳೂರು, ಹೈದರಾಬಾದ್ ಗೆ ತೆರಳುವ ವಿಮಾನಗಳ ಸಂಚಾರವನ್ನು ರದ್ದುಗೊಳಿಸಿರುವುದರ ಬಗ್ಗೆ ಏರ್ ಇಂಡಿಯಾ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ.
ಈ ದಿನ ಸಂಚಾರವನ್ನು ರದ್ದುಗೊಳಿಸಲಾಗಿರುವ ವಿಮಾನಗಳ ಸಂಖ್ಯೆ ಬಗ್ಗೆ ವೆಬ್ ಸೈಟ್ ನಲ್ಲಿ ತಕ್ಷಣಕ್ಕೆ ಮಾಹಿತಿ ಇಲ್ಲ. ಮಾ.13 ರಂದೂ ಸಹ ಇಂಡಿಗೋ ಹಲವು ವಿಮಾನ ಸಂಚಾರವನ್ನು ರದ್ದುಗೊಳಿಸಿತ್ತು.
ಇಂಡಿಗೋ ವಿಮಾನಗಳ ಸಂಚಾರ ರದ್ದುಗೊಂಡಿರುವುದರಿಂದ ಸಾವಿರಾರು ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದ್ದು, ಉಂಟಾಗಿರುವ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುವುದಾಗಿ ಹೇಳಿದೆ.