ಸಾಂದರ್ಭಿಕ ಚಿತ್ರ 
ವಾಣಿಜ್ಯ

ಪಿಎನ್ ಬಿ ಹೊರತುಪಡಿಸಿ ಬೇರೆ ಯಾವುದೇ ಬ್ಯಾಂಕುಗಳು ಅಕ್ರಮವಾಗಿ ಎಲ್ಒಯುವನ್ನು ನೀಡಿಲ್ಲ: ಎಸ್ ಬಿಐ

ಎಲ್ಲಾ ಸಾರ್ವಜನಿಕ ವಲಯ ಬ್ಯಾಂಕುಗಳು ಹೊರಡಿಸಿರುವ ಸಾಲ ಒಪ್ಪಂದ ಪತ್ರ(ಎಲ್ಒಯು)ವನ್ನು ...

ನವದೆಹಲಿ:  ಎಲ್ಲಾ ಸಾರ್ವಜನಿಕ ವಲಯ ಬ್ಯಾಂಕುಗಳು ಹೊರಡಿಸಿರುವ ಸಾಲ ಒಪ್ಪಂದ ಪತ್ರ(ಎಲ್ಒಯು)ವನ್ನು ಪರಿಶೀಲಿಸಲಾಗಿದ್ದು ಪಂಜಾಬ್ ನ್ಯಾಷನಲ್ ಬ್ಯಾಂಕು ಹೊರತುಪಡಿಸಿ ಬೇರೆ ಯಾವುದೇ ಬ್ಯಾಂಕುಗಳು ಅನಧಿಕೃತ ಎನ್ಒಯುವನ್ನು ಹೊರಡಿಸಿಲ್ಲ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶತಕೋಟಿ ಜ್ಯುವೆಲ್ಲರ್ ಉದ್ಯಮಿ ನೀರವ್ ಮೋದಿ ಮತ್ತು ಅವರ ಸಂಬಂಧಿಕ ಮೆಹುಲ್ ಚೊಕ್ಸಿ ಕೆಲವು ಪಂಜಾಬ್ ನ್ಯಾಷನಲ್ ಬ್ಯಾಂಕಿನ ಅಧಿಕಾರಿಗಳೊಂದಿಗೆ ಸಂಪರ್ಕವಿರಿಸಿಕೊಂಡು ಅನಧಿಕೃತವಾಗಿ ಸಾಲ ಒಪ್ಪಂದ ಪತ್ರ ಮಾಡಿಸಿಕೊಂಡು 12,968 ಕೋಟಿ ರೂಪಾಯಿ ವಂಚನೆ ಮಾಡಿದ್ದರು.

ಸಾರ್ವಜನಿಕ ವಲಯ ಬ್ಯಾಂಕುಗಳ ಕಾರ್ಯನಿರ್ವಹಣೆ ಮತ್ತು ತಾಂತ್ರಿಕ ಅಪಾಯ ವ್ಯವಸ್ಥಾಪಕಗಳ ಕುರಿತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದೊಂದಿಗೆ ನಡೆದ ಕಾರ್ಯಗಾರದಲ್ಲಿ ಸಾರ್ವಜನಿಕ ವಲಯ ಬ್ಯಾಂಕುಗಳ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರತಿ ಬ್ಯಾಂಕುಗಳು ಈಗಾಗಲೇ ವಹಿವಾಟುಗಳಿಗೆ ಸಂಬಂಧಪಟ್ಟ ಎಲ್ಒಯು/ ಎಲ್ಒಸಿಗಳನ್ನು ಸ್ಕ್ಯಾನ್ ಮಾಡಿದ್ದು, ಎಲ್ಲಾ ಬ್ಯಾಂಕುಗಳು ಸರಿಯಾಗಿ ಮೌಲ್ಯಮಾಪನ ಮಾಡಿವೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಹೊರತುಪಡಿಸಿ ಬೇರೆಲ್ಲಾ ಬ್ಯಾಂಕುಗಳು ನಿಜವಾದ ಲೆಕ್ಕಗಳನ್ನು ನೀಡಿವೆ ಎಂದು ಎಸ್ ಬಿಐಯ ಉಪ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್.ಶಾಸ್ತ್ರಿ ತಿಳಿಸಿದ್ದಾರೆ.

2011 ಮಾರ್ಚ್ ತಿಂಗಳಿನಿಂದ ಮುಂಬೈಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯು ಉದ್ಯಮಿ ನೀರವ್ ಮೋದಿಗೆ ಸೇರಿದ ಸಮೂಹ ಕಂಪೆನಿಗಳಿಗೆ 1213 ಎಲ್ ಒಯುಗಳನ್ನು ಅಕ್ರಮವಾಗಿ ಹೊರಡಿಸಿದೆ.

ಈ ಕೇಸಿನ ವಿಚಾರಣೆ ನಡೆಸುತ್ತಿರುವ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಇದು ದೇಶದಲ್ಲಿ ಅತ್ಯಂತ ದೊಡ್ಡ ಬ್ಯಾಂಕಿಂಗ್ ಹಗರಣವಾಗಿದೆ ಎಂದು ವ್ಯಾಖ್ಯಾನಿಸಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಸತ್ತಿನ ಎರಡೂ ಸದನಗಳಲ್ಲಿ ಕಲಾಪಗಳು ಗದ್ದಲ, ಕೋಲಾಹಲಗಳಲ್ಲಿಯೇ ಸಾಗುತ್ತಿದ್ದು ಸರಿಯಾಗಿ ಕಲಾಪಗಳು ನಡೆಯುತ್ತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT