ನೀರವ್ ಮೋದಿ 
ವಾಣಿಜ್ಯ

ಜಾರಿ ನಿರ್ದೇಶನಾಲಯದಿಂದ ನೀರವ್ ಮೋದಿ ಆಸ್ತಿ ವಶಕ್ಕೆ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಉದ್ಯಮಿ ...

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಉದ್ಯಮಿ ನೀರವ್ ಮೋದಿಗೆ ಸೇರಿದ ಅಹ್ಮದ್ ನಗರದಲ್ಲಿರುವ ಸೌರ ವಿದ್ಯುತ್ ಘಟಕ ಮತ್ತು 134 ಎಕರೆ ಜಮೀನನ್ನು ವಶಪಡಿಸಿಕೊಂಡಿದೆ.

ಇದಕ್ಕೂ ಮುನ್ನ ಜಾರಿ ನಿರ್ದೇಶನಾಲಯ ನೀರವ್ ಮೋದಿಗೆ ಸೇರಿದ ಸುಮಾರು 523.72 ಕೋಟಿ ರೂಪಾಯಿ ಬೆಲೆಬಾಳುವ 21 ಆಸ್ತಿಗಳು ಮತ್ತು ಅವರ ಒಡೆತನದ ಕಂಪೆನಿಗಳನ್ನು ತಾತ್ಕಾಲಿಕವಾಗಿ ಲಗತ್ತಿಸಿತ್ತು.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಗಳ ಪ್ರಕಾರ, ಗೀತಾಂಜಲಿ ಜೆಮ್ಸ್ ಅಧ್ಯಕ್ಷ ಮೆಹುಲ್ ಚೊಕ್ಸಿ, ನೀರವ್ ಮೋದಿ ಮತ್ತು ಅವರ ಅಳಿಯನಿಗೆ ಸೇರಿದ ಪಾಸ್ ಪೋರ್ಟ್ ಗಳನ್ನು ಹಿಂತೆಗೆದುಕೊಂಡಿತ್ತು. ಇವರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ನೀಡಿದ್ದ ಶೋಕಾಸ್ ನೊಟೀಸ್ ಗೆ ಪ್ರತಿಕ್ರಿಯಿಸಿರಲಿಲ್ಲ.

ಅನೇಕ ಮೂಲಗಳಿಂದ ಸಾಲ ಪಡೆದುಕೊಳ್ಳಲು ಸಾಲ ಒಪ್ಪಂದ ಪತ್ರವನ್ನು ಪಡೆದುಕೊಂಡಿದ್ದ ನೀರವ್ ಮೋದಿ ಮತ್ತು ಮೆಹುಲ್ ಚೊಕ್ಸಿ, ಸುಮಾರು 1.8 ಶತಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದಾರೆ.

2011ರಲ್ಲಿ ಆರಂಭವಾದ ಹಗರಣ ಕಳೆದ ತಿಂಗಳು ಬೆಳಕಿಗೆ ಬಂದಿತ್ತು. ಪಂಜಾಬ್ ನ್ಯಾಷನಲ್ ಬ್ಯಾಂಕಿನ ಅಧಿಕಾರಿಗಳು ಸಂಬಂಧಪಟ್ಟ ಸಂಸ್ಥೆಗಳಿಗೆ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT