ಸಂಗ್ರಹ ಚಿತ್ರ 
ವಾಣಿಜ್ಯ

ಬೆಲೆ ಏರಿಕೆ ಪರಿಣಾಮ, ಪೆಟ್ರೋಲ್, ಡೀಸೆಲ್ ದರ ಏರಿಕೆ, ಸಾರ್ವಕಾಲಿಕ ದಾಖಲೆ!

ಅಂತಾರಾಷ್ಟ್ರೀಯ ಕಚ್ಛಾತೈಲ ದರದಲ್ಲಿ ಸತತ ಏರಿಕೆ ಪರಿಣಾಮ ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ.

ಬೆಂಗಳೂರು: ಅಂತಾರಾಷ್ಟ್ರೀಯ ಕಚ್ಛಾತೈಲ ದರದಲ್ಲಿ ಸತತ ಏರಿಕೆ ಪರಿಣಾಮ ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರಗಳ ಮೇಲಿನ ನಿಯಂತ್ರಣ ತೆಗೆದ ಬಳಿಕ ನಿಯಮಿತವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆಯಾಗ ತೊಡಗಿದ್ದು, ಇಂದು ಮತ್ತೆ ಪೆಟ್ರೋಲ್ ದರದಲ್ಲಿ 33 ಪೈಸೆ ಏರಿಕೆಯಾಗಿದೆ. ಆ ಮೂಲಕ ರಾಜಧಾನಿ ದೆಹಲಿಯಲ್ಲೇ  ಪ್ರತೀ ಲೀಟರ್ ಪೆಟ್ರೋಲ್ ದರ 76.24ರೂ ಗೆ ಏರಿಕೆಯಾಗಿದ್ದು, ಡೀಸೆಲ್ ದರದಲ್ಲೂ 26 ಪೈಸೆಯಷ್ಟು ಏರಿಕೆಯಾಗಿ ಡೀಸೆಲ್ ದರ 67.57ಕ್ಕೆ ಏರಿಕೆಯಾಗಿದೆ.
ಇನ್ನು ಹಾಲಿ ದರ ಇತಿಹಾಸದಲ್ಲೇ ಗರಿಷ್ಠ ಪ್ರಮಾಣಕ್ಕೆ ಏರಿಕೆಯಾಗಿದ್ದು, ಈ ಹಿಂದಿನ ದಾಖಲೆಯನ್ನು ಅಳಿಸಿಹಾಕಿದೆ. ಈ ಹಿಂದೆ ಕಳೆದ ಸೆಪ್ಟೆಂಬರ್ ನಲ್ಲಿ ದೆಹಲಿಯಲ್ಲಿ ದರ ಏರಿಕೆ ಪರಿಣಾಮ ಪೆಟ್ರೋಲ್ ದರ 76.06 ರೂ ಗೆ ತಲುಪಿತ್ತು, ಇದು ಈ ವರೆಗಿನ ಗರಿಷ್ಠ ದರ ಎಂದು ಹೇಳಲಾಗುತ್ತಿತ್ತು. ಆದರೆ ಇಂದು ಆ ದಾಖಲೆಯನ್ನೂ ಮುರಿದು ಪೆಟ್ರೋಲ್ ದರ  76.24ರೂ ಗೆ ಏರಿಕೆಯಾಗಿದೆ.
ಇನ್ನು ಪೆಟ್ರೋಲ್ ದರ ವಿವಿಧ ರಾಜ್ಯಗಳಲ್ಲಿ ವಿವಿಧ ದರಗಳಿದ್ದು, ಆಯಾ ಜಿಲ್ಲೆಗಳಲ್ಲಿ ಹಾಲಿ ಇರುವ ದರದಲ್ಲೇ 33 ಪೈಸೆ ಏರಿಕೆಯಾಗಲಿದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ": Instagram ಖಾತೆ ನಿರ್ಬಂಧ ಬೆನ್ನಲ್ಲೇ Meta ವಿರುದ್ಧ ಕೇಜ್ರಿವಾಲ್ ಆಕ್ರೋಶ..!

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್

Mojtaba Khamenei ಎಲ್ಲಿದ್ದಾರೆ? ರಹಸ್ಯ ತಾಣದಲ್ಲಿ ಪರಮೋಚ್ಛ ನಾಯಕ; ಅವರ ಉಪಸ್ಥಿತಿಯೇ ನಮ್ಮ ಧೈರ್ಯ ಎಂದ Iran ಅಧ್ಯಕ್ಷ

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ