ಸಂಗ್ರಹ ಚಿತ್ರ 
ವಾಣಿಜ್ಯ

ಮೇ 30, 31ರಂದು ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ: ಎಸ್ ಬಿಐ

ವೇತನ ಪರಿಷ್ಕರಣೆಗೆ ಆಗ್ರಹಿಸಿ 10 ಲಕ್ಷಕ್ಕೂ ಅಧಿಕ ಸರ್ಕಾರಿ ಮತ್ತು ಖಾಸಗಿ ಬ್ಯಾಂಕ್ ನೌಕರರು ಮೇ 30ರಿಂದ 48 ಗಂಟೆ ಕಾಲ ಮುಷ್ಕರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ವೇತನ ಪರಿಷ್ಕರಣೆಗೆ ಆಗ್ರಹಿಸಿ 10 ಲಕ್ಷಕ್ಕೂ ಅಧಿಕ ಸರ್ಕಾರಿ ಮತ್ತು ಖಾಸಗಿ ಬ್ಯಾಂಕ್ ನೌಕರರು ಮೇ 30ರಿಂದ 48 ಗಂಟೆ ಕಾಲ ಮುಷ್ಕರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಇದೇ ಮೇ 30 ಮತ್ತು ಮೇ 31ರಂದು 2 ದಿನಗಳ ಕಾಲ ಸರ್ಕಾರಿ ಮತ್ತು ಖಾಸಗಿ ಬ್ಯಾಂಕ್ ಗಳ ನೌಕರರು ಮುಷ್ಕರ ಹಮ್ಮಿಕೊಂಡಿದ್ದು ಆ ಎರಡು ದಿನಗಳ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಮೇ 30ರಂದು ಬೆಳಿಗ್ಗೆ 6 ಗಂಟೆಯಿಂದ ಮುಷ್ಕರ ಆರಂಭಿಸಲು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್​ಬಿಯು) ನಿರ್ಧರಿಸಿದೆ. ಈ ಸಂಬಂಧ ಅಖಿಲ ಭಾರತ ಬ್ಯಾಂಕ್​ಗಳ ಸಂಘಟನೆ (ಐಬಿಎ) ಮತ್ತು ಮುಖ್ಯ ಕಾರ್ವಿುಕ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಮಾಧ್ಯಮಗಳಿಗೆ ತಿಳಿಸಿದ್ದಾರೆ. 
ಸರ್ಕಾರ ಸೂಚಿಸಿದ್ದರೂ ವೇತನ ಪರಿಷ್ಕರಣೆಗೆ ಐಬಿಎ ವಿಳಂಬ ಮಾಡುತ್ತಿದೆ ಎಂದು ನೌಕರರು ಆರೋಪಿಸಿದ್ದು, ಇದೇ ಕಾರಣಕ್ಕೆ 48 ಗಂಟೆಗಳ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಹೇಳಲಾಗಿದೆ. ವೇತನ ಪರಿಷ್ಕರಣೆಯೂ ಸೇರಿದಂತೆ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟವು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬ್ಯಾಂಕ್ ಮುಷ್ಕರಕ್ಕೆ ಬೆಂಬಲ ಸೂಚಿಸಲಾಗಿದೆ. ಇನ್ನು ಖಾಸಗಿ ಬ್ಯಾಂಕ್ ಗಳಾದ ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್ ಮತ್ತು ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಗಳು ಈಗಾಗಲೇ ಮೇ 30 ಮತ್ತು 31ರಂದು ತನ್ನ ಸೇವೆ ಸ್ಥಗಿತವಾಗಲಿದೆ ಎಂದು ಪ್ರಕಟಣೆ ನೀಡಿವೆ.
ಇದೇ ವಿಚಾರವಾಗಿ ದೇಶದ ಅತೀ ದೊಡ್ಡ ಬ್ಯಾಂಕಿಂಗ್ ಸಂಸ್ಥೆ ಎಸ್ ಬಿಐ ಕೂಡ ಪ್ರಕಟಣೆ ನೀಡಿದ್ದು, ಐಬಿಎ ವಿಳಂಬ ಧೋರಣೆಯನ್ನು ಖಂಡಿಸಿ ಅಖಿಲ ಭಾರತ ಬ್ಯಾಂಕಿಂಗ್ ನೌಕರರ ಸಂಘ 2 ದಿನಗಳ ಮುಷ್ಕರಕ್ಕೆ ಕರೆ ನೀಡಿದ್ದು ಮೇ 30 ಮತ್ತು ಮೇ31ರಂದು ತನ್ನ ಸೇವೆಯಲ್ಲಿ ವ್ಯತ್ಯವಾಗಲಿದೆ ಎಂದು ಹೇಳಿದೆ. ಇನ್ನು ಯುಎಫ್​ಬಿಯು ನಿರ್ಧಾರಕ್ಕೆ ಅದರ ಅಧೀನ ಒಕ್ಕೂಟಗಳಾದ ಎಐಬಿಬಿಎ ಎಐಬಿಇಎ, ಎಐಬಿಒಸಿ, ಎನ್ಸಿಬಿಇ, ಎಐಬೊಎ, ಬಿಇಎಫ್ಐ, ಐಎನ್ ಬಿಇಎಫ್, ಐಎನ್ ಬಿಒಸಿ, ಎನ್ ಒಬಿಡಬಲ್ಯೂ, ಎನ್ ಒಬಿಒ ಸಹಮತ ವ್ಯಕ್ತಪಡಿಸಿವೆ.
ಸಿಬ್ಬಂದಿಗಳ ವೇತನ ಪರಿಷ್ಕರಣೆ ಸಂಬಂಧ ಬ್ಯಾಂಕ್ ವ್ಯವಸ್ಥಾಪಕ ಮಂಡಳಿ ಐಬಿಎ ವಿಳಂಭ ಧೋರಣೆ ಅನುಸರಿಸುತ್ತಿದೆ. ಇದು ಅನ್ಯಾಯ, ಕೇಂದ್ರ ಸರ್ಕಾರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮುಷ್ಕರ ನಡೆಸಲಾಗುವುದು ಎಂದು ಸಿಬ್ಬಂದಿಗಳು ಈ ಹಿಂದೆ ಎಚ್ಚರಿಕೆ ನೀಡಿದ್ದರು. ಸಿಬ್ಬಂಗಳ ವೇತನದಲ್ಲಿ ಶೇ. 2ರಷ್ಟು ವೇತನ ಏರಿಕೆ ಮಾಡಬೇಕು ಎಂದು ನೌಕರರು ಈ ಹಿಂದೆ ಆಗ್ರಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT