ಬೆಂಗಳೂರು: ದೇಶಾದ್ಯಂತ ಪೆಟ್ರೋಲ್ ದರ ಏರಿಕೆಗೆ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದು, ಸರ್ಕಾರ ಪೆಟ್ರೋಲ್ ದರವನ್ನು 25 ರೂಪಾಯಿ ಕಡಿಮೆ ಮಾಡಬಹುದು ಎಂದು ಮಾಜಿ ಕೇಂದ್ರ ಸಚಿವ ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.
ಪೆಟ್ರೋಲ್ ದರ ಏರಿಕೆ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಕೇಂದ್ರ ಸಚಿವ ಚಿದಂಬರಂ, ಸರ್ಕಾರ ಪೆಟ್ರೋಲ್ ದರವನ್ನು 25 ರೂಪಾಯಿ ಕಡಿಮೆ ಮಾಡಬಹುದು ಆದರೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರಕ್ಕೆ ಪ್ರತಿ ಲೀಟರ್ ಪೆಟ್ರೋಲ್ ಗೆ ತೆರಿಗೆಯೂ ಸೇರಿ ಒಟ್ಟು 25 ರೂಪಾಯಿ ಉಳಿತಾಯವಾಗುತ್ತದೆ. ಇದು ಸಾಮಾನ್ಯ ಜನಕ್ಕೆ ಸೇರಬೇಕಾದ ಹಣ ಆದರೆ ಕೇಂದ್ರ ಸರ್ಕಾರ ದರ ಕಡಿಮೆ ಮಾಡುವುದಿಲ್ಲ ಕೇವಲ 1, 2 ರೂಪಾಯಿಗಳನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುತ್ತದೆ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.
ಪೆಟ್ರೋಲ್ ದರ ಪ್ರತಿ ಲೀಟರ್ ಗೆ 76.8 ರೂಪಾಯಿಗಳಿಗೆ ಏರಿಕೆಯಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದೆ.