ನವದೆಹಲಿ: ಅಂತಾರಾಷ್ಟ್ರೀಯ ಕಚ್ಛಾತೈಲ ದರದಲ್ಲಿ ಸತತ ಏರಿಕೆ ಪರಿಣಾಮ ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದ 16 ದಿನಗಳ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿದೆ ಎಂಬ ಖುಷಿಗೆ ಇದೀಗ ತಣ್ಣೀರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾದ ಬೆನ್ನಲ್ಲೇ ಬೆಳಗ್ಗೆ ಪ್ರತಿ ಲೀಟರ್ ಪೆಟ್ರೋಲ್ ದರವನ್ನು 60 ಪೈಸೆ ಹಾಗೂ ಡೀಸೆಲ್ ದರದಲ್ಲಿ 56 ಪೈಸೆ ಕಡಿಮೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಆದರೆ ತಾಂತ್ರಿಕ ದೋಷದಿಂದ ಈ ಮಾಹಿತಿ ಬಿತ್ತರವಾಗಿದ್ದು ಪೆಟ್ರೋಲ್ ಮತ್ತು ಡೀಸೆಲ್ ದರ ಕೇವಲ 1 ಪೈಸೆ ಇಳಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸ್ಪಷ್ಟಪಡಿಸಿದೆ.
ಮಂಗಳವಾರ ಪೆಟ್ರೋಲ್ ದರ 78.43 ತಲುಪುವ ಮೂಲಕ ಈವರೆಗಿನ ಅತಿ ಹೆಚ್ಚು ದರಮಟ್ಟವನ್ನು ತಲುಪಿತ್ತು. ಪೆಟ್ರೋಲ್ ದರ ಕಡಿತದ ಬಳಿಕ ದೆಹಲಿಯಲ್ಲಿ ಪೆಟ್ರೋಲ್ ದರ 78.42 ರುಪಾಯಿ ಆಗಿದೆ. ಇನ್ನು ಡೀಸೆಲ್ ದರ 69.31 ತಲುಪಿದ್ದು ಇದೀಗ ದರ ಇಳಿಕೆ ಬಳಿಕ 68.30 ರುಪಾಯಿ ಆಗಿದೆ.