ಯಶ್ ಬ್ಯಾಂಕ್ ಅಧ್ಯಕ್ಷ ಅಶೋಕ್ ಚಾವ್ಲಾ ರಾಜೀನಾಮೆ
ತಕ್ಷಣದಿಂದ ಜಾರಿಗೆ ಬರುವಂತೆ ಯೆಸ್ ಬ್ಯಾಂಕ್ ನ ಕಾರ್ಯನಿರ್ವಾಹಕಯೇತರ ಅಧ್ಯಕ್ಷ ಅಶೋಕ್ ಚಾವ್ಲಾ ಅವರು...
ಮುಂಬೈ: ತಕ್ಷಣದಿಂದ ಜಾರಿಗೆ ಬರುವಂತೆ ಯೆಸ್ ಬ್ಯಾಂಕ್ ನ ಕಾರ್ಯನಿರ್ವಾಹಕಯೇತರ ಅಧ್ಯಕ್ಷ ಅಶೋಕ್ ಚಾವ್ಲಾ ಅವರು ರಾಜೀನಾಮೆ ನೀಡಿದ್ದಾರೆ ಎಂದು ಬುಧವಾರ ಯೆಸ್ ಬ್ಯಾಕ್ ತಿಳಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ)ನ ಒಪ್ಪಿಗೆ ಪಡೆದು ಶೀಘ್ರದಲ್ಲೇ ಹೊಸ ಅಧ್ಯಕ್ಷರನ್ನು ನೇಮಕ ಮಾಡುವುದಾಗಿ ಯೆಸ್ ಬ್ಯಾಂಕ್ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ತಿಂಗಳು ಆರ್ ಬಿಐ ಯೆಸ್ ಬ್ಯಾಂಕ್ ನ ಸಿಇಒ ರಾಣಾ ಕಪೂರ್ ಅವರ ಸೇವೆ ವಿಸ್ತರಿಸಲು ನಿರಾಕರಿಸಿತ್ತು. ಅಲ್ಲದೆ 2019ರ ಫೆಬ್ರವರಿ 1ರೊಳಗೆ ಹೊಸ ಮುಖ್ಯಸ್ಥರನ್ನು ನೇಮಕ ಮಾಡುವಂತೆ ಆದೇಶಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.