ತೈಲೋತ್ಪನ್ನಗಳ ದರ ಮತ್ತೆ ಇಳಿಕೆ, ಪೆಟ್ರೋಲ್ 18 ಪೈಸೆ ಇಳಿಕೆ!
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾದ ಪರಿಣಾಮ ಶುಕ್ರವಾರವೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.
ಮುಂಬೈ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾದ ಪರಿಣಾಮ ಶುಕ್ರವಾರವೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.
ಸತತ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಇಂದೂ ಕೂಡ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ಇಂದು ಪೆಟ್ರೋಲ್ ದರಲ್ಲಿ 18 ಪೈಸೆಯಷ್ಟು ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ 16 ಪೈಸೆಯಷ್ಟು ಇಳಿಕೆ ಕಂಡು ಬಂದಿದೆ. ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 77.10ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ 71.93 ಕ್ಕೆ ಇಳಿಕೆಯಾಗಿದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲೂ ಪೆಟ್ರೋಲ್ ದರದಲ್ಲಿ 18ಪೈಸೆಯಷ್ಟು ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 11 ಪೈಸೆಯಷ್ಟು ಇಳಿಕೆಯಾಗಿದೆ. ಆ ಮೂಲಕ ಪ್ರತೀ ಲೀಟರ್ ಪೆಟ್ರೋಲ್ ದರ 82.62 ರೂಗಳಿಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 17 ಪೈಸೆಯಷ್ಟು ಕಡಿಮೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 75.36ಕ್ಕೆ ಇಳಿಕೆಯಾಗಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 77.72 ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 72.31 ರೂಗೆ ಇಳಿಕೆಯಾಗಿದೆ. ಈ ಬಗ್ಗೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ತನ್ನ ವೆಬ್ ಸೈಟಿನಲ್ಲಿ ಮಾಹಿತಿ ನೀಡಿದೆ.
ಉಚಿತ ಎಸ್ಎಂಎಸ್ ಮಾಡಿ, ತೈಲೋತ್ಪನ್ನಗಳ ದರ ತಿಳಿಯಿರಿ
ಇನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಂಸ್ಥೆಗೆ ಗ್ರಾಹಕರು ಎಸ್ಎಂಎಸ್ ಕಳುಹಿಸುವ ಮೂಲಕ ಆಯಾ ನಗರದಲ್ಲಿನ ದರಗಳ ಮಾಹಿತಿ ಪಡೆಯಬಹುದು. ಈ ಬಗ್ಗೆ ಸಂಸ್ಥೆ ತನ್ನ ವೆಬೈ ಸೈಟ್ ನಲ್ಲಿ ಮಾಹಿತಿ ನೀಡಿದ್ದು, ಗ್ರಾಹಕರು https://www.iocl.com/Products/PetrolDieselPrices.aspx ಗೆ ಭೇಟಿ 92249 92249 ನಂಬರ್ ಗೆ ಆಯಾ ಜಿಲ್ಲೆಯ ಕೋಡ್ ಅನ್ನು ಎಸ್ಎಂಎಸ್ ಮಾಡಿ ದರಗಳ ಮಾಹಿತಿ ಪಡೆಯಬಹುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.