ನವದೆಹಲಿ: ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ ಮುಂಬೈನಲ್ಲಿ ಸಾರ್ವಕಾಲಿಕ ದಾಖಲೆ ಏರಿಕೆ ಕಂಡಿದೆ.
ಸೋಮವಾರ ಬೆಳಗ್ಗೆ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆಯಷ್ಟು ಏರಿಕೆಯಾಗಿದ್ದು, ಡೀಸೆಲ್ ದರದಲ್ಲಿ 32 ಪೈಸೆಯಷ್ಟು ಏರಿಕೆಯಾಗಿದೆ. ಆ ಮೂಲಕ ತೈಲೋತ್ಪನ್ನಗಳು ದರ ಏರಿಕೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದಿವೆ. ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 83.49ರೂ ಗೆ ಏರಿಕೆಯಾಗಿದ್ದು, ಕೋಲ್ಕತಾದಲ್ಲಿ 85.30, ಚೆನ್ನೈನಲ್ಲಿ 86.80 ರೂಗೆ ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲದರಲ್ಲಿ ಗಣನೀಯ ಏರಿಕೆಯಾಗುತ್ತಿರುವುದು ಇಂಧನ ದರ ಏರಿಕೆಗೆ ಕಾರಣ ಎನ್ನವಾಗಿದೆ.